ಸಾಂದರ್ಭಿಕ ಚಿತ್ರ 
ರಾಜ್ಯ

ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ-ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ–ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ.

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ–ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ.

ಹಿಂದಿರುಗುವ ಪ್ರಯಾಣದಲ್ಲಿ, ಫೆಬ್ರವರಿ 14ರಂದು ರೈಲು ಸಂಖ್ಯೆ 06210 ಕಲಬುರಗಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಕಲಬುರಗಿಯಿಂದ ಬೆಳಿಗ್ಗೆ 10:15ಕ್ಕೆ ಹೊರಟು, ಅದೇ ದಿನ ರಾತ್ರಿ 9:40ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಹಾಗೂ ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಒಂದು ಪ್ರಥಮ ದರ್ಜೆ ಎಸಿ ಹಾಗೂ ಎಸಿ-2 ಟೈರ್ (ಸಂಯೋಜಿತ), ಎರಡು ಎಸಿ-3 ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ಎಸ್ಎಲ್ಆರ್ ಬೋಗಿಗಳು ಇರಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್