ಶಾಸಕ ಭೈರತಿ ಬಸವರಾಜ್ 
ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು.

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಗುರುವಾರ ಸುಪ್ರೀಂ ಕೋರ್ಟ್ ಸಹ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು.

ಬಳಿಕ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಈಗ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು.

ಭೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಸಹ ಜಾರಿ ಮಾಡಲಾಗಿದೆ.

ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಕೆಕೆ ಮಿಶ್ರಾ ಪುತ್ರನ ಬಂಧನ

ಬಾಂಗ್ಲಾದೇಶ ಐತಿಹಾಸಿಕ ಸಂಸತ್ ಚುನಾವಣೆ: ಮತದಾನ ಪ್ರಗತಿಯಲ್ಲಿ, 50 ಲಕ್ಷ ಯುವ ಮತದಾರರು-Video

ಅಮೃತ್ ಭಾರತ ಯೋಜನೆಯಡಿ ಬೆಂಗಳೂರಿನ 9 ರೈಲು ನಿಲ್ದಾಣಗಳ ನವೀಕರಣ

ನಾಳೆಯಿಂದ ಹಂಪಿ ಉತ್ಸವದಲ್ಲಿ ಮೊದಲ ಬಾರಿ ಡ್ರೋನ್ ಪ್ರದರ್ಶನ

ವಿಧಾನಸೌಧಕ್ಕೆ ಚಿನ್ನ-ಹಣ ಬಂದಿದ್ದು ಹೇಗೆ..? ತನಿಖೆಗೆ ರಾಜ್ಯ ಸರ್ಕಾರ ಆದೇಶ

SCROLL FOR NEXT