ಮೃತ ಮಹಿಳೆ ಪುಷ್ಪವತಿ 
ರಾಜ್ಯ

ತುಮಕೂರು: ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು!

ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು.

ತುಮಕೂರು: ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ.

ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು. ಈ ಸಾವಿಗೆ ತಾಯಿ ಪುಷ್ಪವತಿ ಕಾರಣ ಎನ್ನುವ ಶಂಕೆಯನ್ನು ಸುಚಿತ್ರಾಗೆ ಜ್ಯೋತಿಷಿ ಹೇಳಿದ್ದನು. ಆನ್​ಲೈನ್​​ನಲ್ಲಿ ಜ್ಯೋತಿಷಿಯನ್ನ ಸಂಪರ್ಕಿಸಿದ್ದ ಸುಚಿತ್ರಾ‌‌, ತಂದೆ ಸಾವಿಗೆ ನಿಮ್ಮ ತಾಯಿ ಮಾಟ ಮಾಡಿಸಿದ್ದಾಳೆ ಎಂಬ ಜ್ಯೋತಿಷ್ಯದ ಮಾತುಗಳನ್ನು ನಂಬಿದ್ದಳು ಎನ್ನಲಾಗಿದೆ.

ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಜ್ಯೋತಿಷಿ ಹೇಳಿದ್ದ ಮಾತನ್ನು ನಂಬಿದ್ದ ಸುಚಿತ್ರಾ, ತಾಯಿ ಪುಷ್ಪವತಿ ಮನೆಯೊಳಗೆ ನಿದ್ರಿಸುತ್ತಿದ್ದ ವೇಳೆ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ತಾಯಿಯು ಮೃತಪಟ್ಟ ನಂತರ, ಈ ಸಾವನ್ನು ಸಹಜ ಸಾವು ಎಂದು ಬಿಂಬಿಸಿ, ಅಂತ್ಯಕ್ರಿಯೆ ನಡೆಸಲು ಮಗಳು ಸುಚಿತ್ರಾ ಮುಂದಾಗಿದ್ದಳು.

ಆದರೆ, ಮೃತದೇಹದ ಸ್ಥಿತಿ ಹಾಗೂ ಸಂದರ್ಭಗಳನ್ನು ಗಮನಿಸಿದ ಗ್ರಾಮಸ್ಥರು ಇದು ಅಸಹಜ ಸಾವು ಅಲ್ಲ, ಕೊಲೆ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು. ಸದ್ಯ ಇದು ಸಹಜ ಸಾವಲ್ಲ ಕೊಲೆ ಎಂದು ಗೊತ್ತಾಗಿದ್ದು, ಘಟನೆ ಸಂಬಂಧಪಟ್ಟಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಚಿತ್ರಾ ಮತ್ತು ಆಕೆಯ ಪತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ನಿಯಂತ್ರಿಸಲು ಬಂದರೆ ಕ್ಷಿಪಣಿ ದಾಳಿ: ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ..!

ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಏ.20ಕ್ಕೆ ಅಮೆರಿಕಾಕ್ಕೆ..!

ನಾನೇನು ಕೇರಳದಲ್ಲಿ ಮೋಜು- ಮಸ್ತಿಗೆ ಹೋಗಿರಲಿಲ್ಲ: ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ; ಆಪ್ತರ ತಲೆದಂಡ- ಜಮೀರ್ ಕೆಂಡ!

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಮಹತ್ವದ ಆದೇಶ

SCROLL FOR NEXT