ಹಂಪಿ ಉತ್ಸವದಲ್ಲಿ ಬೆಂಕಿಯ ಚಿತ್ರ 
ರಾಜ್ಯ

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುವಾಗ ಬೆಂಕಿ; ತಪ್ಪಿದ ಅನಾಹುತ!

ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 8-05ಕ್ಕೆ ಮುಖ್ಯ ವೇದಿಕೆಗೆ ಆಗಮಿಸಿದ್ದಾರೆ. ಈ ವೇಳೆ ವೇದಿಕೆಯ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಗಿದೆ.

ಹಂಪಿ: ವಿಜಯನಗರ ಜಿಲ್ಲೆ ಹೂಸಪೇಟೆ ತಾಲ್ಲೂಕಿನ ಪ್ರಸಿದ್ಧ ಹಂಪಿ ಉತ್ಸವ ಉದ್ಘಾಟನಾ ಸಮಾರಂಭದ ವೇದಿಕೆ ಬಳಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 8-05ಕ್ಕೆ ಮುಖ್ಯ ವೇದಿಕೆಗೆ ಆಗಮಿಸಿದ್ದಾರೆ. ಈ ವೇಳೆ ವೇದಿಕೆಯ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಗಿದೆ. ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ.

ವೇದಿಕೆ ಬಳಿ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಹಾಗೂ ಗಣ್ಯರು ಆತಂಕಗೊಂಡಿದ್ದರು. ಆದರೆ ಸ್ಥಳದಲ್ಲಿದ್ದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವದಲ್ಲಿ ಬೈ ಸ್ಕೈ, ಎತ್ತುಗಳ ಪ್ರದರ್ಶನ, ರಂಗೋಲಿ ಸ್ಪರ್ಧೆ, ಫಲ ಪುಷ್ಪ ಪ್ರದರ್ಶನ, ಮತ್ಸ್ಯ ಮೇಳ, ಬೋಟಿಂಗ್, ಹಂಪಿ ಇತಿಹಾಸ ಕುರಿತು ವಿಚಾರ ಸಂಕಿರಣ, ಆಹಾರ ಮೇಳ, ಡ್ರೋನ್ ಪ್ರದರ್ಶನ, ಗ್ರಾಮೀಣ ಕ್ರೀಡೆಗಳು, ಕವಿಗೋಷ್ಠಿ, ಗಾಳಿಪಟ ಪ್ರದರ್ಶನ, ಯುವ ಗೋಷ್ಠಿ, ಜಾನಪದ ವಾಹಿನಿ ಮತ್ತಿತರ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ