ಸಿಎಂ ಸಿದ್ದರಾಮಯ್ಯ 
ರಾಜ್ಯ

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸರಕಾರಕ್ಕೆ ಕಳಂಕ ತರುವ ದುರುದ್ದೇಶದಿಂದ ಈ ಕೃತ್ಯವೆಸಗಲಾಗಿದೆ

ಬೆಂಗಳೂರು: ಮಂಡ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರಿನಲ್ಲಿ ಅಬಕಾರಿ ಉಪ ಆಯುಕ್ತರನ್ನಾಗಿ ನಿಯೋಜಿಸಲು ಸಿಎಂ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸರಕಾರಕ್ಕೆ ಕಳಂಕ ತರುವ ದುರುದ್ದೇಶದಿಂದ ಈ ಕೃತ್ಯವೆಸಗಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 336(3) ಮತ್ತು 336(4) ಮತ್ತು ಫೋರ್ಜರಿ ಮತ್ತು ಸೆಕ್ಷನ್ 340(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಮಂಡ್ಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಕೆ.ಮೋಹನ್ ಅವರನ್ನು ಮೈಸೂರು ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಕುರಿತು ಟಿಪ್ಪಣಿಯು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಲಾಗಿದೆ ಎಂದು ಸಿಎಂ ಜಂಟಿ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಧಿಕೃತ ಸಂಖ್ಯೆ ಮತ್ತು ದಿನಾಂಕವಿಲ್ಲದ ಈ ಟಿಪ್ಪಣಿಯು ಮುಖ್ಯಮಂತ್ರಿಯವರ ಸಚಿವಾಲಯದ ಇ - ತಂತ್ರಾಂಶ(E-Office)ದಲ್ಲಿ ನೋಂದಾಯಿಸಿರುವುದಿಲ್ಲ ಹಾಗೂ ಟಿಪ್ಪಣಿಯನ್ನು ಯಾವುದೇ ಇಲಾಖೆಗೆ ರವಾನಿಸಿರುವುದಿಲ್ಲ. ಇದರ ಆಧಾರದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಆದೇಶ ಸಹ ಹೊರಡಿಸಿರುವುದಿಲ್ಲ. ಆದಾಗ್ಯೂ ಮುಖ್ಯಮಂತ್ರಿಯವರಿಗೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರನ್ನು ತರುವ ದುರುದ್ದೇಶದಿಂದ ಈ ತರಹದ ಕೃತ್ಯವನ್ನು ಎಸಗಿರುವುದು ಕಂಡುಬಂದಿರುವುದರಿಂದ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಿ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಇದಕ್ಕೂ ಮುನ್ನಾ ಬಿಜೆಪಿಯ ಹಿರಿಯ ಶಾಸಕ ಸುನೀಲ್ ಕುಮಾರ್, ಪತ್ರವನ್ನು ಪೋಸ್ಟ್ ಮಾಡಿ, ಸಿಎಂ ಸಿದ್ದರಾಮಯ್ಯನವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್