ರಾಜ್ಯ

ಎಚ್ಚರ ಗ್ರಾಹಕರೇ: ಗ್ರಾಹಕರ 3.5 ಕೋಟಿ ರೂ ಮೌಲ್ಯದ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಉದ್ಯೋಗಿ ಬಂಧನ!

ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಫೆಬ್ರವರಿ 5ರಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ ನಂತರ ವಂಚನೆ ಬೆಳಕಿಗೆ ಬಂದಿದೆ.

ಉನ್ನತ ಅಧಿಕಾರಿಗಳಿಗೆ ತಿಳಿಸದೆ ಬ್ಯಾಂಕ್ ಲಾಕರ್‌ಗಳಿಂದ 2,780 ಗ್ರಾಂ ಗ್ರಾಹಕರ ಚಿನ್ನಾಭರಣಗಳನ್ನು ತೆಗೆದು ಆರೋಪಿಗಳು ಹಣಕಾಸು ಕಂಪನಿಯಲ್ಲಿ ಅಡಮಾನ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಸಮಯದಲ್ಲಿ ಆರೋಪಿಗಳು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಹಣವನ್ನು ಖರ್ಚು ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಅನ್ನು ಬಂಧಿಸಲಾಗಿದೆ.

ನಾವು ಚಿನ್ನವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿಯವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್ ಹೇಳಿದರು. ಇದೇ ವೇಳೆ, ಗ್ರಾಹಕರಿಗೆ ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಲಾಗಿರುವ ತಮ್ಮ ಆಭರಣಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಪರಿಶೀಲಿಸುವಂತೆ ಪೊಲೀಸರು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT