ಸಿಎಂ ಸಿದ್ದರಾಮಯ್ಯ 
ರಾಜ್ಯ

ಸಕಾರಾತ್ಮಕ ಟೀಕೆಗೆ ಮುಕ್ತ ಆದರೆ, ಸುಳ್ಳು ಸುದ್ದಿಗಳ ಅಪಪ್ರಚಾರ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು: ಮಂಡ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರಿನಲ್ಲಿ ಅಬಕಾರಿ ಉಪ ಆಯುಕ್ತರನ್ನಾಗಿ ನಿಯೋಜಿಸಲು ಸಿಎಂ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದರ ಬೆನ್ನಲ್ಲೇ ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ.

ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್/ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT