ಸಾಂದರ್ಭಿಕ ಚಿತ್ರ  
ರಾಜ್ಯ

ತಾಯಿ ಫೋಟೋಶೂಟ್ ಮಾಡಿಸುವಾಗ ಅವಘಡ: 3 ವರ್ಷದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವು

ಲಕ್ಷ್ಮೀರ್ (3ವ) ಮೃತ ಮಗುವಾಗಿದ್ದು, ಗರ್ಭಿಣಿ ತಾಯಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ.

ನೆಲಮಂಗಲ: ಎರಡನೇ ಮಗುವಿನ ಖುಷಿಯಲ್ಲಿದ್ದ ದಂಪತಿಯ ಮೊದಲನೇ ಮಗು ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ.

ಲಕ್ಷ್ಮೀರ್ (3ವ) ಮೃತ ಮಗುವಾಗಿದ್ದು, ಗರ್ಭಿಣಿ ತಾಯಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ಪೂಲ್​​ಗೆ ಬಿದ್ದು ಮೃತಪಟ್ಟಿದೆ. ಮಗುವಿನ ವಿಚಾರದಲ್ಲಿನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರಗೆ ರವಾನೆ ಮಾಡಲಾಗಿದೆ.

ಲಕ್ಷ್ಮೀರ್, ಬೆಂಗಳೂರಿನ ಜೆ.ಪಿ. ನಗರ ನಿವಾಸಿಯಾಗಿರುವ ಸ್ವಾತಿ ಹಾಗೂ ಚರಣ್ ರಾಜ್ ದಂಪತಿಯ ಮಗುವಾಗಿದ್ದು, ಒಂದು ವಾರದ ಹಿಂದೆ ಕೆಲಸದ ನಿಮಿತ್ತ ಚರಣ್ ರಾಜ್ ವಿದೇಶಕ್ಕೆ ತೆರಳಿದ್ದರು. ಪೋಟೋ ಶೂಟ್ ಮಾಡಿಸುವುದಾಗಿ ಗಂಡನ ಬಳಿ ಹೇಳಿ ಸ್ವಾತಿ ಸ್ನೇಹಿತೆಯೊಂದಿಗೆ ಬಂದಿದ್ದರು.

ಈ ವೇಳೆ ಅವಘಡ ನಡೆದಿದೆ. ಇನ್ನು ವಿದೇಶದಲ್ಲಿರುವ ಚರಣ್ ರಾಜ್ ನಾಳೆ ಬೆಂಗಳೂರಿಗೆ ಬರಲಿದ್ದು, ಈ ಹಿನ್ನೆಲೆ ಮಗುವಿನ ಮರಣೋತ್ತರ ಪರೀಕ್ಷೆ ನಾಳೆ ನಡೆಸಲಿದೆ ಎಂಬ ಮಾಹಿತಿ ಸಿಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮಗೆ ಬುದ್ಧಿವಂತಿಕೆಯ ಕೊರತೆಯಿದ್ದರೆ AI ಬಗ್ಗೆ ಪೋಸ್ಟ್ ಮಾಡಬೇಡಿ: ರಾಹುಲ್ ಗೆ ಬಿಜೆಪಿ

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್- ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ!

ನಟ ಸಲ್ಮಾನ್ ಖಾನ್ ತಂದೆ ಆರೋಗ್ಯ ಏರುಪೇರು: Brain Haemorrhage, ಮುಂಬೈ ಆಸ್ಪತ್ರೆಗೆ ದಾಖಲು!

India AI Impact Summit: ಚೀನಾದ ರೋಬೋಡಾಗ್ ವಿವಾದ; ಸ್ಟಾಲ್ ತೆರವುಗೊಳಿಸಲು ಗಾಲ್ಗೋಟಿಯಾಸ್ ವಿವಿಗೆ ಸೂಚನೆ; Video

'ಬರೀ ಸುಳ್ಳು.. ನಿಮ್ಮಿಂದಾಗಿ ಹೊಟೆಲ್ ನಲ್ಲಿ ಪಾತ್ರೆ ತೊಳೆಯಬೇಕಾಯಿತು': ಪಾಕ್ ವಿರುದ್ಧ ನಾಯಕ Shakeel Ammad Butt ಕಿಡಿ!

SCROLL FOR NEXT