ಯಾದಗಿರಿ: ಆಂಧ್ರ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ.
ಆಂಧ್ರ ಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ರೂಸರ್ ವಾಹನ ಡಿವೈಡರ್ ಗೆ ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಾದಗಿರಿ (Yadagiri) ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮ ನಿವಾಸಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೂಲಗಳ ಪ್ರಕಾರ ಕುಟುಂಬಸ್ಥರು ಶ್ರೀಶೈಲಂ ಯಾತ್ರೆಗೆ ತೆರಳುತ್ತಿದ್ದರು ಎಂದು ಹೇಳಲಾಗಿದ್ದು, ಕುಟುಂಬವು ಶುಕ್ರವಾರ ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿದ್ದರು.
ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕ್ರೂಸರ್ ಚಲಿಸುತ್ತಿದ್ದಾಗ ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಕಾರು ಅಪಘಾತಕ್ಕೀಡಾಗಿದೆ. ಕಾರು ಚಾಲನೆ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತರನ್ನು ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಮತ್ತು ವಿಜಯಪುರ ಮೂಲದ ಮಹದೇವಪ್ಪ (65) ಎಂದು ಗುರುತಿಸಲಾಗಿದೆ. ಅಂತೆಯೇ ಈ ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ತಿಳಿದು ಬಂದಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.