ಬನ್ನೇರುಘಟ್ಟ ಜೈವಿಕ ಉದ್ಯಾನವನ 
ರಾಜ್ಯ

Bannerghatta Biological Park: ಚಿರತೆ ದಾಳಿಗೊಳಗಾದ ಸಿಬ್ಬಂದಿಗೆ ಶಸ್ತ್ರ ಚಿಕಿತ್ಸೆ

ಗಾಯಗೊಂಡಿದ್ದ ಪ್ರಾಣಿ ಪಾಲಕ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಶನಿವಾರ ಅವರ ಮುಖದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಬೆಂಗಳೂರು: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಚಿರತೆ ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸಿಬ್ಬಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನ (ಬಿಬಿಪಿ) ರಕ್ಷಣಾ ಕೇಂದ್ರದಲ್ಲಿ ಶುಕ್ರವಾರ ಚಿರತೆಯ ದಾಳಿಯಿಂದ 47 ವರ್ಷದ ಮೃಗಾಲಯದ ಸಿಬ್ಬಂದಿ ಶಾಂತಪ್ಪ ಅವರ ಮುಖಕ್ಕೆ ಗಂಭೀರ ಗಾಯಗಳಾಗಿತ್ತು. ಗಾಯಗೊಂಡಿದ್ದ ಪ್ರಾಣಿ ಪಾಲಕ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಶನಿವಾರ ಅವರ ಮುಖದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಏನಾಗಿತ್ತು?

ಶಾಂತಪ್ಪ ಪ್ರಾಣಿಗಳ ಆವರಣವನ್ನು ಸ್ವಚ್ಛಗೊಳಿಸುತ್ತಿದ್ದಾಗ ಚಿರತೆ ಅವರ ಮೇಲೆ ದಾಳಿ ಮಾಡಿ ಗೀಚಿದೆ. ಸ್ವಚ್ಛಗೊಳಿಸುವಾಗ ಸುರಕ್ಷತಾ ಕ್ರಮವಾಗಿ ಪ್ರಾಣಿಗಳನ್ನು ಬೇರೆ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಶಾಂತಪ್ಪ ಆವರಣದ ಹತ್ತಿರ ಹೋದರು. ಈ ವೇಳೆ ಚಿರತೆ ದಾಳಿ ಮಾಡಿದೆ.

ಈ ಬಗ್ಗೆ ಬಿಬಿಪಿ ಕಾರ್ಯನಿರ್ವಾಹಕ ನಿರ್ದೇಶಕ ಎವಿ ಸೂರ್ಯ ಸೇನ್ ಮಾತನಾಡಿ, 'ಶಾಂತಪ್ಪ ಹಲವಾರು ವರ್ಷಗಳಿಂದ ಚಿರತೆಗಳನ್ನು ನಿರ್ವಹಿಸುತ್ತಿದ್ದಾರೆ ಮತ್ತು ಅವರು ಅನುಭವಿ ಮತ್ತು ಜಾಗರೂಕರಾಗಿದ್ದಾರೆ. "ಎಲ್ಲಾ ಪ್ರಾಣಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆ. ಹೀಗಾಗಿ ಯಾವುದೇ ರೋಗ ಹರಡುವ ಸಾಧ್ಯತೆಗಳು ಇಲ್ಲ ಎಂದರು.

ಇತ್ತೀಚಿನ ದಿನಗಳಲ್ಲಿ ಇದು ಮೊದಲ ಘಟನೆಯಾಗಿದೆ. ಒಂದೆರಡು ವರ್ಷಗಳ ಹಿಂದೆ ಹುಲಿಯೊಂದು ಮೃಗಾಲಯದ ಪಾಲಕರನ್ನು ಗಾಯಗೊಳಿಸಿದಾಗ ಇದೇ ರೀತಿಯ ದಾಳಿ ಸಂಭವಿಸಿದೆ ಎಂದು ಅವರು ಹೇಳಿದರು.

ಶಾಂತಪ್ಪ ಎಲ್ಲಾ ವೈದ್ಯಕೀಯ ವೆಚ್ಚಗಳನ್ನು ಆಡಳಿತ ಮಂಡಳಿಯೇ ಭರಿಸುತ್ತಿದೆ ಮತ್ತು ಶಾಂತಪ್ಪ ಜಿಗಣಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೇನ್ ಹೇಳಿದರು.

ಮೂಲಗಳ ಪ್ರಕಾರ ಇಲ್ಲಿ 80 ಚಿರತೆಗಳಿದ್ದು, 21 ಚಿರತೆಗಳು ಮೃಗಾಲಯದ ಸಫಾರಿ ಪ್ರದೇಶದಲ್ಲಿವೆ ಎನ್ನಲಾಗಿದೆ.

ನೌಕರಿ ಖಾಯಂಗೆ ಪತ್ನಿ ಒತ್ತಾಯ

ಇನ್ನು ಘಟನೆ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿದ್ದರು. ಇದೀಗ ಚಿರತೆ ದಾಳಿ ಮಾಡಿದೆ. ಅವರೇ ಮನೆಗೆ ಆಧಾರವಾಗಿದ್ದರು.

ಹೀಗಾಗಿ ಅವರನ್ನ ಖಾಯಂ ನೌಕರರನ್ನಾಗಿ ಮಾಡಿಕೊಳ್ಳಬೇಕು ಮತ್ತು ಗುತ್ತಿಗೆ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel