ಸಿದ್ದಲಿಂಗ ರೆಡ್ಡಿ 
ರಾಜ್ಯ

ಶಿವಮೊಗ್ಗ: 40 ಸಾವಿರ ಲಂಚಕ್ಕೆ ಕೈಯೊಡುತ್ತಿದ್ದ KAS ಅಧಿಕಾರಿ ಸೇರಿ ಇಬ್ಬರು Lokayukta ಬಲೆಗೆ!

40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ ಕಛೇರಿಗೆ ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ಸಿದ್ದಲಿಂಗ ರೆಡ್ಡಿ ಅವರು ಕೇಶವಮೂರ್ತಿಗೆ 40,000 ರೂ. ಲಂಚ ನೀಡುವಂತೆ ಸೂಚಿಸಿದ್ದರು. ಈ ಬಗ್ಗೆ ಕೇಶವಮೂರ್ತಿ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಸಿದ್ದಲಿಂಗ ರೆಡ್ಡಿ ಸೂಚನೆಯಂತೆ ಫೆ.14ರ ಸಂಜೆ ಹೊಳಲೂರು ನಾಡಕಛೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ 40,000 ರೂ. ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ