ಕರ್ನಾಟಕ ಹೈಕೋರ್ಟ್- ಸುಬ್ಬಾರೆಡ್ಡಿ online desk
ರಾಜ್ಯ

ಕಾಂಗ್ರೆಸ್ ಗೆ ಬಿಗ್ ಶಾಕ್: ಬಾಗೆಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು- ಹೈಕೋರ್ಟ್ ಆದೇಶ

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಲು ಎಸ್‌.ಎನ್‌.ಸುಬ್ಬಾರೆಡ್ಡಿ ಅವರಿಗೆ ಅವಕಾಶ ಇದೆ.

ಬೆಂಗಳೂರು: ಕಾಂಗ್ರೆಸ್ ಗೆ ಭಾರಿ ಹಿನ್ನೆಡೆಯುಂಟಾಗುವ ಆದೇಶವೊಂದು ಹೈಕೋರ್ಟ್ ನಿಂದ ಹೊರಬಿದ್ದಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಕಟಿಸಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದ ಬಿಜೆಪಿಯ ಅಭ್ಯರ್ಥಿ ಸಿಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಪೀಠ, ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶ ನೀಡಿದೆ. ಅಸಿಂಧುಗೊಳಿಸಿದ ಆದೇಶವನ್ನು  ಚುನಾವಣಾ ಆಯೋಗಕ್ಕೆ ರವಾನೆ ಮಾಡಲು ಹೈಕೋರ್ಟ್ ಆದೇಶಿಸಿದೆ. ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ಹೈಕೋರ್ಟ್ ಆದೇಶ ನೀಡಿದೆ. 

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಲು ಎಸ್‌.ಎನ್‌.ಸುಬ್ಬಾರೆಡ್ಡಿ ಅವರಿಗೆ ಅವಕಾಶ ಇದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ 6 ತಿಂಗಳೊಳಗಾಗಿ ತಡೆಯಾಜ್ಞೆ ನೀಡದಿದ್ದರೇ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸಬೇಕಾಗುತ್ತೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಸ್ಥಾನ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಏಳು ಮಂದಿ ಸಜೀವ ದಹನ

ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಡಿಕೆಶಿ ಬಂಡೆ ಅಲ್ಲ ರೈಲ್ವೆ ಎಂಜಿನ್, ಬರೋವಾಗ ದೊಡ್ಡ ಸೌಂಡ್ ಇರುತ್ತೆ; ಬಿ.ಕೆ ಹರಿಪ್ರಸಾದ್

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ಹರಿಯಾಣ, ರಾಜಸ್ಥಾನದಲ್ಲಿ ಶೂಟರ್ ಸೇರಿ ಆರು ಮಂದಿ ಬಂಧನ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಷಯ ಮತ್ತೆ ಮುನ್ನೆಲೆಗೆ; ಸುಪ್ರೀಂ ನಲ್ಲಿ ಏ.07 ರಿಂದ ವಿಚಾರಣೆ

T20 ವಿಶ್ವಕಪ್ 2026: ಪಾಕಿಸ್ತಾನ ವಿರುದ್ಧ 2ನೇ ಹೀನಾಯ ಸೋಲು, ಇತಿಹಾಸದಲ್ಲೇ ಗರಿಷ್ಟ ಮೊತ್ತ.. ದಾಖಲೆಗಳ ಪಟ್ಟಿ!

SCROLL FOR NEXT