ಆತ್ಮಹತ್ಯೆಗೆ ಯತ್ನಿಸಿದ ರೈತ 
ರಾಜ್ಯ

ವಿಜಯನಗರ: ಮನೆ ಕಟ್ಟಲು ಅನುಮತಿ ನೀಡಿಲ್ಲ ಎಂದು ನೊಂದು ರೈತ ಆತ್ಮಹತ್ಯೆಗೆ ಯತ್ನ

ಮನೆ ನಿರ್ಮಾಣಕ್ಕೆ ಇ-ಸ್ವತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಲಾಗಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯನಗರ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬುವವರು ಗ್ರಾಮ ಪಂಚಾಯತ್ ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮನೆ ನಿರ್ಮಾಣಕ್ಕೆ ಇ-ಸ್ವತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಲಾಗಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಇಲ್ಲದೇ ಬ್ಯಾಂಕ್ ಸಾಲ ಸಿಗುತ್ತಿಲ್ಲ. ಕಳೆದ ಆರು ತಿಂಗಳಿನಿಂದ ಕಚೇರಿಗೆ ಸುತ್ತಾಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಈ ವೇಳೆ ಪಿಡಿಒ ಆಗಿರುವ ಕೃಷ್ಣಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲೇ ಅರ್ಧ ಲೀಟರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯನ್ನು ಗಮನಿಸಿದ ಪಿಡಿಒ ಕೃಷ್ಣಪ್ಪ ಹಾಗೂ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಕಾಪಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video