ಜಮೀರ್ ಅಹ್ಮದ್ ಖಾನ್-ಸೋಮಣ್ಣ 
ರಾಜ್ಯ

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನೂತನ ರಸ್ತೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಇಂದು ಲೋಕಾರ್ಪಣೆಗೊಳಿಸಿದರು. ಈ ರಸ್ತೆ ಮೇಲ್ಸೇತುವೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು.

ಬೆಂಗಳೂರು: ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನೂತನ ರಸ್ತೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಇಂದು ಲೋಕಾರ್ಪಣೆಗೊಳಿಸಿದರು. ಈ ರಸ್ತೆ ಮೇಲ್ಸೇತುವೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು. ನೂತನ ಮೇಲ್ಸೇತುವೆಯು ವಿಜಯನಗರ ಹಾಗೂ ಪಾದರಾಯನಪುರದ ಜನತೆಗೆ ಸಹಕಾರಿಯಾಗಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ಇದೇ ವೇಳೆ ಮಾತನಾಡಿದ ರಾಜ್ಯ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಸೋಮಣ್ಣ ಮಾಡುವ ಹಾಗೆ ಯಾರು ಮಾಡೋಕೆ ಸಾಧ್ಯವಿಲ್ಲ ಎಂದು ಸೋಮಣ್ಣರನ್ನು ಕಂಡಾಡಿದರು. ರಾಜ್ಯದಲ್ಲಿನ 220 ಶಾಸಕರು ಸಹ ಸೋಮಣ್ಣ ರೀತಿ ಕ್ಷೇತ್ರದ ಅಭಿವೃದ್ಥಿಯನ್ನು ಮಾಡಲು ಸಾಧ್ಯವಿಲ್ಲ ಎಂದರು. ಬಡವರ ಕೆಲಸ ಅಂದರೆ ದೇವರ ಕೆಲಸ ಅಂತ ಭಾವಿಸಿ ಸೋಮಣ್ಣ ಕೆಲಸ ಮಾಡುತ್ತಾರೆ. ನಾನು ಮೊದಲ ಸಲ ಶಾಸಕನಾದಾಗ ನನಗೆ ನನ್ನ ರಾಜಕೀಯ ಸ್ನೇಹಿತರು ಕ್ಷೇತ್ರದ ಕೆಲಸವನ್ನು ಯಾವ ರೀತಿ ಮಾಡಬೇಕು ಅಂತ ಕಲಿಯಬೇಕಾದರೆ ಸೋಮಣ್ಣನ ಕ್ಷೇತ್ರ ವಿಜಯನಗರವನ್ನು ನೋಡಿ ಎಂದು ನನಗೆ ಸಲಹೆ ನೀಡಿದ್ದರು ಎಂದು ಜಮೀರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!