ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕತ್ತು ಹಿಸುಕಿ ಪತ್ನಿ ಕೊಲೆ ಮಾಡಿದ ಇಸ್ರೋ ನಿವೃತ್ತ ಉದ್ಯೋಗಿಯ ಬಂಧನ

ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಆರೋಪಿ ನಾಗೇಶ್ವರ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ 65 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಬುಧವಾರ ತಮ್ಮ ನಿವಾಸದಲ್ಲಿ ಟವಲ್‌ನಿಂದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಆರೋಪಿ ನಾಗೇಶ್ವರ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾವ್ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಪತ್ನಿಯನ್ನು ಕೊಂದ ನಂತರ ರಾವ್ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿ ಸಂಧ್ಯಾ ಶ್ರೀ ಅವರನ್ನು ಕೊಲೆ ಮಾಡಿದ ನಡೆದ ನಂತರ, ರಾವ್ ಸ್ಥಳದಲ್ಲೇ ಇದ್ದರು. ನಂತರ ಅವರ ಪರಿಚಯಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸ್ ತಂಡ, ನಿವಾಸಕ್ಕೆ ತೆರಳಿ ರಾವ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

"ಆರೋಪಿ ರಾವ್ ಖಿನ್ನತೆಗೆ ಖಿನ್ನತೆಗೆ ಒಳಗಾಗಿದ್ದರು ಮತ್ತು ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯ ನಂತರ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರು ಎಂದು ಹೇಳಲಾಗಿದೆ. ಅಮೆರಿಕದಲ್ಲಿರುವ ದಂಪತಿಯ ಮಗಳಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ" ಎಂದು ಉಪ ಪೊಲೀಸ್ ಆಯುಕ್ತ(ವೈಟ್‌ಫೀಲ್ಡ್) ಸೈದುಲು ಅಡವತ್ ಅವರು ತಿಳಿಸಿದ್ದಾರೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು