ಡಿಕೆ ಶಿವಕುಮಾರ್ 
ರಾಜ್ಯ

ಕಸ ವಿಲೇವಾರಿಗೆ ಅಡ್ಡಿ: ನಿಮ್ಮ ಮನೆ ಮುಂದೆಯೇ ಕಸ ಹಾಕಿಸ್ತೀನಿ- ಬಿಜೆಪಿ ನಾಯಕರಿಗೆ ಡಿಕೆಶಿ ವಾರ್ನಿಂಗ್! Video

ನಗರದಲ್ಲಿನ ಕಸ ವಿಲೇವಾರಿ ಬಿಕ್ಕಟಿನ ಹಿಂದೆ ಕೆಲವು ಹಾಲಿ ಮತ್ತು ಮಾಜಿ ಬಿಜೆಪಿ ಶಾಸಕರ ಕೈವಾಡವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿದರೆ ಎಸ್ಮಾ ಜಾರಿಗೊಳಿಸಲಾಗುವುದು. ಅವರ ಮನೆ ಮುಂದೆ ಕಸ ಸುರಿಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬುಧವಾರ ಬಿಜೆಪಿ ಶಾಸಕರು ಮತ್ತು ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗೌರವದಿಂದ ಇದ್ರೆ ಸರಿ, ಇಲ್ಲದಿದ್ದರೆ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಸ ವಿಲೇವಾರಿಗೆ ಅಡ್ಡಿಪಡಿಸುವ ಬಿಜೆಪಿ ಶಾಸಕರು ಮತ್ತು ಮುಖಂಡರ ಮನೆ ಮುಂದೆ ಕಸ ಹಾಕಿಸಬೇಕಾಗುತ್ತದೆ ಎಂದರು.

ನಗರದಲ್ಲಿನ ಕಸ ವಿಲೇವಾರಿ ಬಿಕ್ಕಟಿನ ಹಿಂದೆ ಕೆಲವು ಹಾಲಿ ಮತ್ತು ಮಾಜಿ ಬಿಜೆಪಿ ಶಾಸಕರ ಕೈವಾಡವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ. ತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮಸ್ಥರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಯಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವರು ತಮ್ಮ ಕ್ಷೇತ್ರದಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಮತ್ತು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ನಮ್ಮನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಕ್ಷೇತ್ರದಲ್ಲಿ ಇದೇ ರೀತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಅಡ್ಡಿಪಡಿಸಿದರೆ ಎಲ್ಲಿ ಕಸ ವಿಲೇವಾರಿ ಮಾಡಬೇಕಾಗುತ್ತದೆ. ಅದನ್ನು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಥವಾ ಬಿಜೆಪಿ ಕಚೇರಿ ಮುಂದೆ ಹಾಕಬೇಕಾಗುತ್ತದೆ ಎಂದರು.

ಬಿಜೆಪಿ ಶಾಸಕರು ಬ್ಲಾಕ್‌ಮೇಲ್ ಮಾಡುತ್ತಿರುವುದಾದರೂ ಏನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಕಸವನ್ನು ಎಲ್ಲೋ ವಿಲೇವಾರಿ ಮಾಡಬೇಕಾದ ಅಗತ್ಯವಿದೆ. ಈ ಹಿಂದೆ ಕಸ ವಿಲೇವಾರಿ ಮಾಡಿದ ಜಾಗದಲ್ಲಿಯೇ ಕಸ ವಿಲೇವಾರಿ ಮಾಡುವುದನ್ನು ಮುಂದುವರಿಸುತ್ತಿದ್ದು, ತಮ್ಮ ಕ್ಷೇತ್ರಗಳಿಗೆ ಹಣ ನೀಡುವಂತೆ ಅವರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಸದ ಲಾರಿಗಳ ಅಪಘಾತದಿಂದ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಪಘಾತಗಳು ಸಂಭವಿಸಬಾರದು ಮತ್ತು ಅಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ.

ಆದರೆ ಕಸ ವಿಲೇವಾರಿ ತಡೆಯಲು ಸಾಧ್ಯವಿಲ್ಲ, ಸದ್ಯ ಆನೇಕಲ್, ಯಶವಂತಪುರ, ಬ್ಯಾಟರಾಯನಪುರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿಗೆ ಇನ್ನೂ ಎರಡು ಸ್ಥಳಗಳನ್ನು ಖರೀದಿಸಲಾಗಿದೆ. ಟೆಂಡರ್ ಕರೆದಿದ್ದೇವೆ. ಕೆಲವು ಕಾನೂನುಗಳನ್ನು ಪರಿಶೀಲಿಸಿದ ನಂತರ ನಾವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

‘ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚಿದ ಕಮಿಷನ್ ಆರೋಪದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಗುತ್ತಿಗೆದಾರರ ಸಂಘದ ಬೆದರಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ದೂರು ದಾಖಲಿಸುವಂತೆ ತಿಳಿಸಿದರು. ಅವರು ಮೊದಲು ಕೆಲಸ ನಿಲ್ಲಿಸಲಿ. ಅನುದಾನದ ಕೊರತೆಯಿಂದ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಗುತ್ತಿಗೆದಾರರಿಗೆ ಯಡಿಯೂರಪ್ಪ ಸರಕಾರ ಹೇಳಿರಲಿಲ್ಲವೇ? ಅದರ ನಡುವೆಯೂ ಬಿಜೆಪಿ ಸರಕಾರ ಗುತ್ತಿಗೆ ನೀಡಿದೆ. ನಿಗದಿಪಡಿಸಿದ ಮೊತ್ತಕ್ಕಿಂತ ಟೆಂಡರ್ ಕರೆದಿದ್ದಾರೆ. ಉದಾಹರಣೆಗೆ, ಬಜೆಟ್‌ನಲ್ಲಿ ಕೇವಲ 10,000 ಕೋಟಿ ರೂ.ಗಳಿದ್ದಾಗ ಅವರು 30,000 ರಿಂದ 40,000 ಕೋಟಿ ರೂ.ಗಳ ಟೆಂಡರ್‌ಗಳನ್ನು ಕರೆದಿದ್ದಾರೆ. ಈಗ ಅದನ್ನು ಹೇಗೆ ಪರಿಹರಿಸಬಹುದು, ”ಎಂದು ಅವರು ಹೇಳಿದರು.

ಗುತ್ತಿಗೆದಾರರು ಕಾಮಗಾರಿ ನಿಲ್ಲಿಸುವಂತೆ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಶಿವಕುಮಾರ್, ಕಾಮಗಾರಿ ನಿಲ್ಲಿಸಲು ಬಯಸುವವರು ನಿಲ್ಲಿಸಬಹುದು. ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ನಿಗದಿಪಡಿಸಿದ ಅನುದಾನದಂತೆ ಗುತ್ತಿಗೆದಾರರಿಗೆ ಹಣ ಪಾವತಿಸುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರೆದ ಉದ್ವಿಗ್ನತೆ; ಇರಾನ್‌-ಅಮೆರಿಕಾ ನಡುವೆ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ..!

ದೇಶದ ಹಿತಾಸಕ್ತಿಯೇ ಮುಖ್ಯ, ಭಾರತದ ಪರವಾಗಿ ಲಾಬಿ ನಡೆಸುವಂತೆ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: H-1B ಕಠಿಣ ನಿಯಮ ಸಮರ್ಥಿಸಿಕೊಂಡ ಜೆಡಿ ವ್ಯಾನ್ಸ್..!

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಅವಘಡ, ಬಾಲಕಿ ಸಾವು, 9 ಮಂದಿಗೆ ಗಾಯ

SCROLL FOR NEXT