ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬ್ರೆಜಿಲಿಯನ್ ಪ್ರಜೆ ಬಂಧನ; 24 ಕೋಟಿ ರೂ ಮೌಲ್ಯದ ಕೊಕೇನ್ ವಶ

ಬಂಧಿತ ಆರೋಪಿ, ಸಾವೊ ಪಾಲೊದಿಂದ ಕತಾರ್‌ನ ದೋಹಾಗೆ ಪ್ರಯಾಣಿಸಿದ್ದರು ಮತ್ತು ನಂತರ ದೋಹಾದಿಂದ ಬೆಂಗಳೂರಿಗೆ ವಿಮಾನ ಹತ್ತಿದ್ದರು.

ಬೆಂಗಳೂರು: ಬೆಂಗಳೂರು ವಲಯ ಘಟಕದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳು ಫೆಬ್ರವರಿ 17 ರಂದು ಬೆಳಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಬ್ರೆಜಿಲ್ ಪ್ರಜೆಯೊಬ್ಬರನ್ನು ಬಂಧಿಸಿದ್ದು, ಆರೋಪಿ ಬಳಿ ಇದ್ದ 23.88 ಕೋಟಿ ರೂ. ಮೌಲ್ಯದ 4.776 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ, ಸಾವೊ ಪಾಲೊದಿಂದ ಕತಾರ್‌ನ ದೋಹಾಗೆ ಪ್ರಯಾಣಿಸಿದ್ದರು ಮತ್ತು ನಂತರ ದೋಹಾದಿಂದ ಬೆಂಗಳೂರಿಗೆ ವಿಮಾನ ಹತ್ತಿದ್ದರು.

“ಆರೋಪಿ ಚೆಕ್-ಇನ್ ಮಾಡಿದ ಸಾಮಾನುಗಳನ್ನು ಪರಿಶೀಲಿಸುವಾಗ, ಅಧಿಕಾರಿಗಳು ನಾಲ್ಕು ಮಹಿಳೆಯರ ಕೈಚೀಲಗಳನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ” ಎಂದು ಬೆಂಗಳೂರಿನ ಎನ್‌ಸಿಬಿ ಬುಧವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

"ಡ್ರಗ್ಸ್ ಕಳ್ಳಸಾಗಣೆ ಪ್ರಯತ್ನದ ಮೂಲ, ಗಮ್ಯಸ್ಥಾನದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ" ಎಂದು ಎನ್ ಸಿಬಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್!

Parliament special session: ಕ್ಷೇತ್ರ ಪುನರ್ ವಿಂಗಡಣೆ-ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!

ಯೋಗೇಶ್ ಗೌಡ ಹತ್ಯೆ ಪ್ರಕರಣ: Congress MLA ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ಶಿಕ್ಷೆ ನಾಳೆ ಪ್ರಕಟ!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್ ಸುಟ್ಟು ಭಸ್ಮ

ಯುದ್ಧದಿಂದ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ: ಪಶ್ಚಿಮ ಏಷ್ಯಾ, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಕರೆ

SCROLL FOR NEXT