ಎಚ್.ಡಿ ರಂಗನಾಥ್ 
ರಾಜ್ಯ

ರೈತರ ಮಕ್ಕಳನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ಘೋಷಿಸಿ: ಶಾಸಕ ಎಚ್.ಡಿ ರಂಗನಾಥ್

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ರೈತರನ್ನು ಮದುವೆಯಾಗಲು ಬಯಸುವುದಿಲ್ಲ. ರೈತ ಮಕ್ಕಳಿಗೆ ವಧುಗಳ ಕೊರತೆ ಎದುರಾಗಿದೆ ಎಂದು ರಂಗನಾಥ್ ತಿಳಿಸಿದ್ದಾರೆ

ಕುಣಿಗಲ್: ರೈತ ಪುರುಷರನ್ನು ಮದುವೆಯಾಗುವ ಮಹಿಳೆಯರಿಗೆ ಆರ್ಥಿಕವಾಗಿ ಪ್ರೋತ್ಸಾಹ ನೀಡುವ ಯೋಜನೆಯನ್ನು ಘೋಷಿಸುವಂತೆ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ರೈತರನ್ನು ಮದುವೆಯಾಗಲು ಬಯಸುವುದಿಲ್ಲ. ರೈತ ಮಕ್ಕಳಿಗೆ ವಧುಗಳ ಕೊರತೆ ಎದುರಾಗಿದೆ ಎಂದು ರಂಗನಾಥ್ ತಿಳಿಸಿದ್ದಾರೆ. ಮಹಿಳೆಯರು ರೈತರನ್ನು ಮದುವೆಯಾಗಿ ಹಳ್ಳಿಗಳಿಗೆ ಏಕೆ ಹೋಗಬೇಕು ಎಂದು ಕೇಳುತ್ತಿದ್ದಾರೆ. ಇದು ವಾಸ್ತವ. ಕೃಷಿ ಕುಟುಂಬಗಳ ಜೀವನವನ್ನು ಸುಧಾರಿಸಲು ನಮ್ಮ ಸರ್ಕಾರ ಏನಾದರೂ ಮಾಡಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ.

ಮಾರ್ಚ್ 6 ರಂದು 2026-27ರ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ ಅವರನ್ನು ಪ್ರೋತ್ಸಾಹಕ ಯೋಜನೆಯನ್ನು ರೂಪಿಸುವಂತೆ ಕೇಳಿಕೊಂಡಿದ್ದೇನೆ ಎಂದು ರಂಗನಾಥ್ ಹೇಳಿದರು. ಕೃಷಿ ಕುಟುಂಬದಲ್ಲಿ ಮದುವೆಯಾಗುವ ಯಾವುದೇ ಮಹಿಳೆಗೆ ಪ್ರೋತ್ಸಾಹಧನ ನೀಡಬೇಕು” ಎಂದು ರಂಗನಾಥ್ ಹೇಳಿದರು.

ಕೃಷಿ ಕುಟುಂಬದ ಸೊಸೆಗೆ ಪ್ರೋತ್ಸಾಹ ಧನ ನೀಡಬೇಕು. ನಾನು ಈಗಾಗಲೇ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದಿದ್ದೇನೆ" ಎಂದು ಅವರು ಹೇಳಿದರು. ರೈತರ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ ನಂತರ ರಂಗನಾಥ್ ಈ ವಿಷಯ ಪ್ರಸ್ತಾಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video