ಅಸ್ಸಾಂ ದೇವಾಲಯದಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಡಿಕೆ ಶಿವಕುಮಾರ್ 
ರಾಜ್ಯ

ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸಲ್ಲ; BJP ಶಾಸಕರೇ ಕಸ ಇಟ್ಟುಕೊಳ್ಳಲಿ, ಜನರಿಂದ ಉಗಿಸಿಕೊಳ್ಳಲಿ: ಡಿ.ಕೆ ಶಿವಕುಮಾರ್

ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ" ಎಂದರು.

ಬೆಂಗಳೂರು: ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಅಸ್ಸಾಂಗೆ ತೆರಳುವುದಕ್ಕೆ ಮುಂಚಿತವಾಗಿ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು. ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ" ಎಂದರು.

"ನಾವು ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಸಾವಿರಾರು ಕೋಟಿಯನ್ನು ಎಷ್ಟು ಎಂದು ಕೊಡಲು ಆಗುತ್ತದೆ. 20, 30 ಕೋಟಿ ಸೇರಿದಂತೆ 50- 100 ಕೋಟಿ ಹಣವನ್ನು ಅಭಿವೃದ್ಧಿಗೆ ಕೊಡುತ್ತಾ ಬಂದಿದ್ದೇವೆ. ನಾವು ಕೊಡುತ್ತೇವೆ. ಅವರು ಅರ್ಥ ಮಾಡಿಕೊಳ್ಳಬೇಕು. ಮಹದೇವಪುರದಲ್ಲಿ ಕಸ ವಿಲೇವಾರಿ ನಿಲ್ಲಿಸಲಾಗಿದೆ. ನಾವು ಸಹ ಅಲ್ಲಿ ಮೂರು ದಿನ ಕಸ ತೆಗೆಯಬೇಡಿ ಎಂದರೆ ಏನಾಗಬಹುದು" ಎಂದರು.

"ಕಸ ವಿಲೇವಾರಿಗೆ ನಾಲ್ಕು ಕಡೆ ಜಮೀನುಗಳನ್ನು ನೋಡಿದ್ದೆವು. ಭೂಮಿ ಸಮಸ್ಯೆ ಬಂದ ಕಾರಣಕ್ಕೆ ಎರಡು ಕಡೆ ಅಂತಿಮ‌ ಮಾಡಿದ್ದೇವೆ. ಟೆಂಡರ್ ಕೂಡ ಕರೆಯಲಾಗಿದೆ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ" ಎಂದರು‌.

ಸಾರಿಗೆ ನೌಕರರ ಬೇಡಿಕೆಗಿಂತ ಕಡಿಮೆ ಹಿಂಬಾಕಿ ನೀಡಿರುವ ಬಗ್ಗೆ ಕೇಳಿದಾಗ, "ಸದ್ಯ ಅಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು. ಸರ್ಕಾರದ ಪರಿಸ್ಥಿತಿಯನ್ನು ಅವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ" ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿ ಅವರ ಜೊತೆ ಅಸ್ಸಾಂ ಭೇಟಿ

ಪ್ರಿಯಾಂಕಾ ಗಾಂಧಿ ಅವರು, ನಾನು, ಭೂಪೇಶ್ ಬಘೇಲ ಅವರು ಹಾಗೂ ತಂಡ ಅಸ್ಸಾಂಗೆ ತೆರಳುತ್ತಿದ್ದೇವೆ. ಹಲವು ವಿಚಾರಗಳ ಕುರಿತು ಸರಣಿ ಸಭೆಗಳನ್ನು ನಡೆಸುತ್ತೇವೆ. ಅಸ್ಸಾಂ ಚುನಾವಣೆ ವಿಚಾರವಾಗಿ ದೆಹಲಿಯಲ್ಲಿ 3-4 ಸಭೆಗಳನ್ನು ನಡೆಸಿದ್ದೇವೆ. ಬೇಕಾದ ಮಾಹಿತಿಗಳನ್ನು ಪಡೆದುಕೊಂಡಿದ್ದೇವೆ. ತಂತ್ರಗಾರಿಕೆ ಸೇರಿದಂತೆ ಇನ್ನಿತರೇ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಾರಿ ಅಸ್ಸಾಂನಲ್ಲಿ ಬದಲಾವಣೆ ಆಗುತ್ತದೆ ಎನ್ನುವ ಭರವಸೆಯಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ: 'ಒಪ್ಪಂದ' ಮಾಡಿಕೊಳ್ಳದಿದ್ದರೆ ಕೆಟ್ಟ ಪರಿಣಾಮ': ಇರಾನ್ ಗೆ Trump ಬೆದರಿಕೆ

T20 World Cup 2026: ಶ್ರೀಲಂಕಾಕ್ಕೆ ಶಾಕ್ ನೀಡಿದ ಜಿಂಬಾಬ್ವೆ! ಕೆನಡಾ ವಿರುದ್ಧ ಅಪ್ಘಾನಿಸ್ತಾನಕ್ಕೆ ಗೆಲುವು

US ಜೊತೆಗಿನ ವ್ಯಾಪಾರ ಒಪ್ಪಂದ ಆಯ್ತು, ಈಗ 'AI' ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕೈ ವಾಗ್ದಾಳಿ; ಏನಿದು ಆರೋಪ?

ಬಂಗಾಳ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮುಳುಗಿ ಬೆಂಗಳೂರು ಮಹಿಳೆ ಸಾವು: ನಾಲ್ವರ ರಕ್ಷಣೆ

Epstein ಆರೋಪದ ನಡುವೆ ಬ್ರಿಟನ್‌ನ ಪ್ರಿನ್ಸ್ ಆಂಡ್ರ್ಯೂ ಬಂಧನ; Video

SCROLL FOR NEXT