ಹಿಮಂತ ಬಿಸ್ವಾಸ್ ಶರ್ಮಾ 
ರಾಜ್ಯ

ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

ಅವರು ದುರ್ಬಲರಾಗಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಮ್ಮ ಕೆಲಸಗಳ ಬಗ್ಗೆ ಆತ್ಮವಿಶ್ವಾಸವಿಲ್ಲ, ತಮ್ಮ ಬದ್ಧತೆಯ ಬಗ್ಗೆಯೇ ವಿಶ್ವಾಸ ಇಟ್ಟುಕೊಂಡಿಲ್ಲ.

ಗುವಾಹಟಿ: ಸೋಲುವ ಭಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಪಾಕಿಸ್ತಾನ ವಿಚಾರವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರು ದುರ್ಬಲರಾಗಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಮ್ಮ ಕೆಲಸಗಳ ಬಗ್ಗೆ ಆತ್ಮವಿಶ್ವಾಸವಿಲ್ಲ, ತಮ್ಮ ಬದ್ಧತೆಯ ಬಗ್ಗೆಯೇ ವಿಶ್ವಾಸ ಇಟ್ಟುಕೊಂಡಿಲ್ಲ. ಈ ಬಾರಿ ಚುನಾವಣೆಯಲ್ಲಿ ಅವರ ಪಕ್ಷ ಸೋಲಲಿದೆ. ಹೀಗಾಗಿ ಹೀಗೆ ಮಾತನಾಡುತ್ತಿದ್ದಾರೆ” ಎಂದರು.

ನಾನು ಮೊದಲು ಕಾಮಾಕ್ಯ ದೇವಾಲಯಕ್ಕೆ ಹೋಗಿ ಈ ರಾಜ್ಯದಲ್ಲಿ ಬದಲಾವಣೆ ತರುವಂತೆ ತಾಯಿ ಬಳಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!