ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಘಟನೆಗೆ ಸಿಎಂ ತೀವ್ರ ಖಂಡನೆ; ಶಾಂತಿ-ಸೌಹರ್ದತೆ ಕಾಪಾಡುವಂತೆ ಮನವಿ

ಘಟನೆ ಬೆನ್ನಲ್ಲೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಶಾಂತಿ ಮತ್ತು ಸೌಹಾರ್ದ ಕಾಪಾಡಿಕೊಳ್ಳುವಂತೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟದ ಘಟನೆ ದುರದೃಷ್ಟಕರವಾದದ್ದು. ಎಲ್ಲಾ ನಾಗರಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ. ಕರ್ನಾಟಕದ ಶಕ್ತಿ ಅದರ ಏಕತೆ ಮತ್ತು ಸಹೋದರತ್ವದಲ್ಲಿದೆ ಎಂದು ಹೇಳಿದ್ದಾರೆ. ಅಲ್ಲದೆ, ಜನರು ಯಾವುದೇ ಅಪಪ್ರಚಾರ ಅಥವಾ ಪ್ರಚೋದನೆಗಳಿಗೆ ಬಲಿಯಾಗಬಾರದು ಎಂದೂ ಮನವಿ ಮಾಡಿದ್ದಾರೆ.

ಘಟನೆ ಬೆನ್ನಲ್ಲೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಉಳಿಸುವುದು ಎಲ್ಲರ ಹೊಣೆಗಾರಿಕೆ ಎಂದು ಹೇಳಿದ್ದಾರೆ.

ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಭಾವಚಿತ್ರ ಮೆರವಣಿಗೆಯಲ್ಲಿ ಹಿಂದೂ ಸಂಘಟನೆ ಮುಖಂಡರು ಸಾಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದಾರೆ.

ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ಬೆನ್ನಲ್ಲೇ ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್