ಪಲ್ಟಿಯಾದ ಟ್ರ್ಯಾಕ್ಟರ್ 
ರಾಜ್ಯ

ಬಾಗಲಕೋಟೆಯ ಜಮಖಂಡಿ ಬಳಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆ: ರಾಜ್ಯದಲ್ಲಿ ಭೀಕರ ಅಪಘಾತ ಘಟನೆ ಮುಂದುವರಿದಿದೆ. ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಇಂದು ಶನಿವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರನ್ನು ಮನೀಷ್ ಪಾಂಡೆ (23ವ), ಹಲಕಿ ಪಾಂಡೆ (2ವ), ಲಕ್ಷ್ಮಿ ಚಿರಮಡಿ (27ವ) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು.

ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT