ಬೈರತಿ ಬಸವರಾಜ್  
ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆಬ್ರವರಿ 26ವರೆಗೆ ನ್ಯಾಯಾಂಗ ಬಂಧನ

9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು.

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು. ಕೋರ್ಟ್ ಅವರನ್ನ 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಮಾಸ್ಕ್ ಧರಿಸಿ ಬಂದ ಶಾಸಕ

ಮುಖಕ್ಕೆ ಮಾಸ್ಕ್​ ಧರಿಸಿ ಜಡ್ಜ್ ಮುಂದೆ ಆರೋಪಿ ಬೈರತಿ ಬಸವರಾಜು ಹಾಜರಾದರು. ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಮತ್ತೆ ಸಿಐಡಿ ಕಸ್ಟಡಿಗೆ ಅಧಿಕಾರಿಗಳು ಮನವಿ ಮಾಡಿದರು. ಇನ್ನೂ ತನಿಖೆಗೆ ಸಂಪೂರ್ಣ ಸಹಕಾರ ನೀಡಿಲ್ಲ. ಇನ್ನಷ್ಟು ತನಿಖೆ ಅಗತ್ಯ ಇದೆ ಎಂದು ವಕೀಲರು ವಾದ ಮಂಡಿಸಿದರು.

ಬಳಿಕ ಆರೋಪಿ ಪರ ವಕೀಲರು ಕೂಡ ಪ್ರತಿವಾದ ಮಾಡಿ, ಈಗಾಗಲೇ 9 ದಿನಗಳು ಕಸ್ಟಡಿಗೆ ನೀಡಲಾಗಿದೆ. ವೈದ್ಯಕೀಯ ವರದಿ ಆಧರಿಸಿ ಕಸ್ಟಡಿಗೆ ನೀಡಬಾರದು ಎಂದು ವಾದ ಮಂಡಿಸಿದರು.

ಅಂದಹಾಗೆ ಬಿಕ್ಲು ಶಿವ ಕೊಲೆ ಕೇಸಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದು, ವೈದ್ಯಕೀಯ ವರದಿ ಆಧರಿಸಿ ಜೈಲಿಗೆ ಕಳುಹಿಸುವಂತೆ ಬೈರತಿ ಪರ ವಕೀಲರು ಮನವಿ ಮಾಡಿದ್ದರು. ಸದ್ಯ ಫೆ.26ರವರೆಗೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.

ಫೆ.26 ರ ವರೆಗೂ ನ್ಯಾಯಾಂಗ ಬಂಧನದಲ್ಲೇ ಇರಬೇಕಿದೆ. ಫೆಬ್ರವರಿ 26 ರಂದು ಮತ್ತೆ ಜಡ್ಜ್ ಮುಂದೆ ಹಾಜರು ಪಡಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT