ಶಾಸಕ ಇಕ್ಬಲ್ ಹುಸೇನ್ 
ರಾಜ್ಯ

ಫೆಬ್ರವರಿ 26ಕ್ಕೆ ಡಿಕೆಶಿಗೆ ಹೈಕಮಾಂಡ್ ಬುಲಾವ್: ಮೂರನೇ ಡೇಟ್ ಕೊಟ್ಟ ಶಾಸಕ ಇಕ್ಬಲ್ ಹುಸೇನ್!

ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದು ಇಕ್ಬಲ್ ಹುಸೇನ್ ಹೇಳಿದರು.

ರಾಮನಗರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಡೇಟ್ ಕೊಟ್ಟಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತ ಇಕ್ಬಲ್ ಹುಸೇನ್ ಇದೀಗ ಮೂರನೇ ಡೇಟ್ ಕೊಟ್ಟಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಫೆ.26 ರಂದು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದೆ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದರು.

ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಾಯಕತ್ವ ಗೊಂದಲ ಪರಿಹರಿಸುವಂತೆ ಹೈಕಮಾಂಡ್ ಒತ್ತಾಯಿಸಿದ್ದಾರೆ ಎಂದು ಹೇಳಿದರು.

ಈ ಹಿಂದೆ ಕೊಟ್ಟ ಎರಡು ಡೇಟ್ಸ್ ಮಿಸ್ ಆಗಿರಬಹುದು, ಮೂರನೇ ದಿನಾಂಕ ಮಿಸ್ ಆಗಲ್ಲ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಇಕ್ಬಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!