ಗರ್ಭಿಣಿ ಮಹಿಳೆ (ಸಂಗ್ರಹ ಚಿತ್ರ) 
ರಾಜ್ಯ

‘Zero Maternal Mortality’ ಗುರಿ: 139.53 ಕೋಟಿ ರೂ, ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ, ಉನ್ನತ ಮಟ್ಟದ ಸಮಿತಿ ರಚನೆ

ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗುವ ಅಂಶಗಳನ್ನು ಪರಿಶೀಲಿಸಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಕಾರ್ಯವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಉನ್ನತ ಮಟ್ಟದ ಅಧಿಕಾರ ಸಮಿತಿಯನ್ನು ರಚಿಸಿದೆ.

2025–26ರ ಕೆಟಿಪಿಪಿ ಯೋಜನೆಯಡಿ ರೂ.139.53 ಕೋಟಿ ವೆಚ್ಚದಲ್ಲಿ ಅನುಮೋದಿಸಲಾದ ಯೋಜನೆಯನ್ನು ಜಾರಿಗೊಳಿಸಲು ಈ ಸಮಿತಿಗೆ ಅಧಿಕಾರ ನೀಡಲಾಗಿದೆ.

ಖಾಲಿ ಹುದ್ದೆಗಳನ್ನು ಗುತ್ತಿಗೆ ಮೂಲಕ ಭರ್ತಿ ಮಾಡಲು ಸಮಿತಿಗೆ ಅನುಮತಿ ನೀಡಲಾಗಿದೆ. ಜೊತೆಗೆ ಶಿಸ್ತು ಕ್ರಮಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಅಧಿಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿರ್ದಿಷ್ಟ ಕಾರ್ಯಗಳಿಗೆ ನಿಯೋಜಿಸುವ ಅಧಿಕಾರವನ್ನೂ ಸಮಿತಿಗೆ ನೀಡಲಾಗಿದೆ.

ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗುವ ಅಂಶಗಳನ್ನು ಪರಿಶೀಲಿಸಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಕಾರ್ಯವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಆದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಮಿತಿ ಮಾರ್ಗದರ್ಶನ ನೀಡಲಿದೆ.

ಗರ್ಭಿಣಿ ಮಹಿಳೆಯರಿಗೆ ಸಮಗ್ರ ತಾಯಿ ಆರೋಗ್ಯ ಸೇವೆಗಳನ್ನು ಸಾರ್ವತ್ರಿಕವಾಗಿ ಒದಗಿಸುವುದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳ ಗುಣಮಟ್ಟ ಸುಧಾರಿಸುವುದು ಮತ್ತು ಆರೋಗ್ಯ ಸೇವೆಗಳಲ್ಲಿ ಅಸಮಾನತೆಗಳನ್ನು ಕಡಿಮೆ ಮಾಡುವುದು ಸಮಿತಿಯ ಗುರಿಯಾಗಿದೆ.

ಇದೇ ವೇಳೆ ಪ್ರಾಥಮಿಕ, ದ್ವಿತೀಯ ಮತ್ತು ತೃತೀಯ ಆರೋಗ್ಯ ಸೇವೆಗಳನ್ನು ಬಲಪಡಿಸಿ, ಸುರಕ್ಷಿತ ಪ್ರಸವಕ್ಕೆ ಅಗತ್ಯವಾದ ಮಾನವ ಸಂಪನ್ಮೂಲ, ಉಪಕರಣಗಳು, ಔಷಧಗಳು ಮತ್ತು ಸೇವೆಗಳ ಲಭ್ಯತೆ ಖಚಿತಪಡಿಸುವುದು, ಸೇವೆಗಳ ಗುಣಮಟ್ಟ ಸುಧಾರಿಸಲು ಜವಾಬ್ದಾರಿ ವ್ಯವಸ್ಥೆ ರೂಪಿಸುವುದು ಹಾಗೂ ಖಾಸಗಿ ವಲಯದೊಂದಿಗೆ ಸಹಕಾರ ಸಾಧಿಸಲು ಸರ್ಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂ ಕೋರ್ಟ್ ತೀರ್ಪಿಗೆ ಡೋಂಟ್ ಕೇರ್: ಶೇ.10ರಷ್ಟು ಜಾಗತಿಕ ಸುಂಕ ಘೋಷಿಸಿದ Donald Trump, ಭಾರತ ಒಪ್ಪಂದ ವಿಷಯ ಪ್ರಸ್ತಾಪ

ನೂತನ ಪಾಲಿಕೆಗಳಿಗೆ 6,500 ಸಿಬ್ಬಂದಿಗಳ ನೇಮಕ: ಆರ್ಥಿಕ ಹೊರೆ ಎಂದ ಸರ್ಕಾರ, ಮರು ಪರಿಶೀಲನೆಗೆ GBA ಮುಂದು..!

ಐತಿಹಾಸಿಕ ತೀರ್ಪು: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಡಾರ್ಕ್ ವೆಬ್ ಗೆ ಅಪ್ಲೋಡ್: ಕಿರಾತಕ ದಂಪತಿಗೆ ಮರಣದಂಡನೆ!

ಸಾರ್ಕೊಯ್ಡೋಸಿಸ್ ಎಂದರೇನು? ಚಿಕಿತ್ಸೆ ಬಗ್ಗೆ ತಿಳಿಯಬೇಕಾದ ವಿವರಗಳಿವು... (ಕುಶಲವೇ ಕ್ಷೇಮವೇ)

ಬಿಹಾರ ರಾಜ್ಯಸಭಾ ಚುನಾವಣೆ: 5 ಶಾಸಕರಿರುವ AIMIM ಪಕ್ಷದ ಓವೈಸಿ ಈಗ 'ಕಿಂಗ್' ಮೇಕರ್!

SCROLL FOR NEXT