ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

"ಅಭಯ ಹಸ್ತ" ಕಾರ್ಯಕ್ರಮ: 1,000 ಮಂದಿಗೆ ನೇಮಕಾತಿ ಆದೇಶ ವಿತರಣೆ; ಕೌನ್ಸೆಲಿಂಗ್ ಮೂಲಕ ಭ್ರಷ್ಟಾಚಾರ ತಡೆದಿದ್ದೇವೆ ಎಂದ ಸಿಎಂ

ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಲಾಗಿದ್ದು, ಕೌನ್ಸೆಲಿಂಗ್ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. “ನೇಮಕಾತಿ ಮತ್ತು ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ನಮ್ಮ ಸರ್ಕಾರದ ದೃಢ ನಿಲುವು. ಏಜೆಂಟ್‌ಗಳ ಮೋಸಕ್ಕೆ ಒಳಗಾಗಬೇಡಿ.

ಬೆಂಗಳೂರು: ರಾಜ್ಯ ಸರ್ಕಾರದ ‘ಅಭಯ ಹಸ್ತ’ ಉದ್ಯೋಗ ಭರವಸೆ ಕಾರ್ಯಕ್ರಮದಡಿ ಸುಮಾರು 1,000 ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.

ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಅಭಯ ಹಸ್ತ" ಕಾರ್ಯಕ್ರಮವನ್ನು ಉದ್ಘಾಟಿಸಿ, ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ವೈದ್ಯರಷ್ಟೇ ಅಲ್ಲ, ವೈದ್ಯೇತರ ಸಿಬ್ಬಂದಿಯೂ ಆರೋಗ್ಯ ಸೇವೆಗೆ ಅತ್ಯಂತ ಅಗತ್ಯ ಎಂದು ಹೇಳಿದರು. ಇದೇ ವೇಳೆ ಜಾತಿ ಮತ್ತು ಧರ್ಮದ ಭೇದವನ್ನು ಮೀರಿಸಿ ಮಾನವೀಯತೆ ಮತ್ತು ಕರುಣೆಯಿಂದ ಸೇವೆ ಸಲ್ಲಿಸುವಂತೆ ಆರೋಗ್ಯ ಸಿಬ್ಬಂದಿಗೆ ಕರೆ ನೀಡಿದರು.

ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಲಾಗಿದ್ದು, ಕೌನ್ಸೆಲಿಂಗ್ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. “ನೇಮಕಾತಿ ಮತ್ತು ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ನಮ್ಮ ಸರ್ಕಾರದ ದೃಢ ನಿಲುವು. ಏಜೆಂಟ್‌ಗಳ ಮೋಸಕ್ಕೆ ಒಳಗಾಗಬೇಡಿ ಎಂದು ಎಚ್ಚರಿಸಿದರು.

ಸರ್ಕಾರದ ಎರಡನೇ ಅವಧಿಯಲ್ಲಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಿವಿಧ ಇಲಾಖೆಗಳಲ್ಲಿನ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಕ್ರಮಬದ್ಧವಾಗಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇಲಾಖೆಯಲ್ಲಿ ಮಾನವ ಸಂಪನ್ಮೂಲ ಕೊರತೆ ಗಂಭೀರವಾಗಿದ್ದು, ಈಗ ವೈದ್ಯರು, ತಂತ್ರಜ್ಞರು ಹಾಗೂ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಹೇಳಿದರು.

“ಸಾರ್ವಜನಿಕ ಸೇವೆ ಒಂದು ಪವಿತ್ರ ಕರ್ತವ್ಯ. ಪ್ರಾಮಾಣಿಕತೆ ಮತ್ತು ಜನಸ್ನೇಹಿ ದೃಷ್ಟಿಕೋನದಿಂದ ಸೇವೆ ಸಲ್ಲಿಸಬೇಕು,” ಎಂದು ತಿಳಿಸಿದರು.

ಒಟ್ಟು 970 ಅರ್ಹ ಪ್ಯಾರಾಮೆಡಿಕಲ್ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದ್ದು, ಇದರಲ್ಲಿ ಕಲ್ಯಾಣ ಕರ್ನಾಟಕದಿಂದ 320 ಮತ್ತು ಇತರ ಪ್ರದೇಶಗಳಿಂದ 650 ಅಭ್ಯರ್ಥಿಗಳು ಸೇರಿದ್ದಾರೆ. ಜೊತೆಗೆ 77 ಔಷಧ ಪರಿಶೀಲಕರಿಗೂ ನೇಮಕಾತಿ ನೀಡಲಾಗಿದೆ. ಈ ನೇಮಕಾತಿ ವಿಷಯ ಸುಪ್ರೀಂ ಕೋರ್ಟ್‌ವರೆಗೆ ಹೋಗಿ ಕಾನೂನುಬದ್ಧವಾಗಿ ಪರಿಹಾರ ಕಂಡಿದೆ ಎಂದು ತಿಳಿಸಿದರು.

ಇದೇ ವೇಳೆ 223 ಡಿ-ಫಾರ್ಮಾ ವಿದ್ಯಾರ್ಥಿಗಳನ್ನು ಅಪ್ರೆಂಟಿಸ್‌ಗಳಾಗಿ ನೇಮಿಸಲಾಗಿದ್ದು, ತಿಂಗಳಿಗೆ ರೂ.8,000 ವೇತನದೊಂದಿಗೆ ಇನ್ನೂ 700 ಮಂದಿಯನ್ನು ನೇಮಕ ಮಾಡುವ ಯೋಜನೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆ ಬಲಪಡಿಸಲು 220 ತಜ್ಞ ವೈದ್ಯರನ್ನು ಶೀಘ್ರ ನೇಮಕ ಮಾಡಲಾಗುತ್ತದೆ.

ನೇಮಕಾತಿ ಪ್ರಕ್ರಿಯೆ ಸರಳಗೊಳಿಸಲು ಪ್ರತ್ಯೇಕ ನೇಮಕಾತಿ ಮಂಡಳಿ ಸ್ಥಾಪನೆಗೆ ಪ್ರಸ್ತಾವನೆ ಇದ್ದು, ಪ್ರಸ್ತುತ 1,400 ಎಂಬಿಬಿಎಸ್ ವೈದ್ಯರು ಕಡ್ಡಾಯ ಗ್ರಾಮೀಣ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ 13,000ಕ್ಕೂ ಹೆಚ್ಚು ಜೀವಗಳು ಉಳಿದಿವೆ ಎಂದು ಸಚಿವರು ಮಾಹಿತಿ ನೀಡಿದರು.

ಇದೇ ವೇಳೆ ಸೌರಶಕ್ತಿ ಆಧಾರಿತ ಆರೋಗ್ಯ ಕೇಂದ್ರಗಳು ಹಾಗೂ ಡಿಜಿಟಲ್ ಹಾಜರಾತಿ ವ್ಯವಸ್ಥೆ ಸೇರಿದಂತೆ ಹಲವು ಸುಧಾರಣೆಗಳ ಮೂಲಕ ಆರೋಗ್ಯ ಸೇವೆ ಸುಧಾರಿಸುವ ಗುರಿಯಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT