ಚಾಲಕನೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವ ಪುಂಡರು. 
ರಾಜ್ಯ

ಬೆಂಗಳೂರು: ಕಾರಿಗೆ ಟಚ್​​ ಆಗಿದ್ದಕ್ಕೆ ರೋಗಿಯನ್ನು ಕರೆತರಲು ಹೊರಟಿದ್ದ ಆಂಬ್ಯುಲೆನ್ಸ್‌ ಅಡ್ಡಗಟ್ಟಿದ ಪುಂಡರು, ನಡುರಸ್ತೆಯಲ್ಲೇ ರಂಪಾಟ..! Video

ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆ್ಯಂಬುಲೆನ್ಸ್ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು ಎನ್ನಲಾಗಿದೆ.

ಬೆಂಗಳೂರು: ಕಾರು ಟಚ್ ಆಗಿದ್ದಕ್ಕೆ ಪುಂಡರ ಗುಂಪೊಂದು ರೋಗಿಯನ್ನು ಕರೆತರಲು ಎಮರ್ಜೆನ್ಸಿ ಸೈರನ್ ಹಾಕಿ ಹೊರಟಿದ್ದ ಆಂಬ್ಯುಲೆನ್ಸ್'ನ್ನು ಅಡ್ಡಗಟ್ಟಿ, ನಡುರಸ್ತೆಯಲ್ಲಿ ರಂಪಾಟ ನಡೆಸಿರುವ ಘಟನೆಯೊಂದು ಆನೇಕಲ್‌ನ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆ್ಯಂಬುಲೆನ್ಸ್ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು ಎನ್ನಲಾಗಿದೆ.

ಪುಂಡರ ಗುಂಪು ಸುಮಾರು ಹದಿನೈದು ನಿಮಿಷಗಳ ಕಾಲ ಆ್ಯಂಬುಲೆನ್ಸ್ ತಡೆದು ನಿಲ್ಲಿಸಿದ್ದು, ಆ್ಯಂಬುಲೆನ್ಸ್ ಚಾಲಕನನ್ನು ಅಶ್ಲೀಲ ಪದಗಳಿಂದ ಬಾಯಿಗೆ ಬಂದಂತೆ ನಿಂದಿಸಿದ್ದಾರೆ.

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರೋಗಿಗಳನ್ನು ಸಾಗಿಸುವ ತುರ್ತು ವಾಹನಕ್ಕೆ ಅಡ್ಡಿಪಡಿಸಿ, ಅದರ ಸಿಬ್ಬಂದಿಗೆ ನಿಂದಿಸಿದ ಕಾರು ಚಾಲಕನ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಘಟನೆಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

SCROLL FOR NEXT