ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿ  
ರಾಜ್ಯ

ಬಾಗಲಕೋಟೆ ಜಿಲ್ಲೆಗೆ ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿ ಪ್ರವೇಶಕ್ಕೆ ನಿರ್ಬಂಧ

ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರೆಹಳ್ಳಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿಷೇಧ ವಿಧಿಸಲಾಗಿದ್ದು, ಫೆಬ್ರವರಿ 21ರಿಂದ ಮಾರ್ಚ್ 21ರವರೆಗೆ ಈ ಇಬ್ಬರೂ ಜಿಲ್ಲೆಗೆ ಪ್ರವೇಶಿಸುವಂತಿಲ್ಲ.

ಬಾಗಲಕೋಟೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶುಕ್ರವಾರದಿಂದ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ.

ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರೆಹಳ್ಳಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿಷೇಧ ವಿಧಿಸಲಾಗಿದ್ದು, ಫೆಬ್ರವರಿ 21ರಿಂದ ಮಾರ್ಚ್ 21ರವರೆಗೆ ಈ ಇಬ್ಬರೂ ಜಿಲ್ಲೆಗೆ ಪ್ರವೇಶಿಸುವಂತಿಲ್ಲ ಎಂದು ಜಿಲ್ಲಾಡಳಿತ ಹಾಗೂ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಘಟನೆಯ ನಂತರ ಉಂಟಾದ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಬ್ಬರ ಮೇಲೆ ನಿರ್ಬಂಧ ಹೇರಿದ್ದಾರೆ.

ಬಾಗಲಕೋಟೆ ನಗರದಲ್ಲಿ ಇತ್ತೀಚೆಗೆ ನಡೆದ ಕಲ್ಲು ತೂರಾಟ ಘಟನೆಯ ಬಳಿಕ ವಿವಿಧ ಸಮುದಾಯಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಯೋಜನೆ ಮಾಡಿಕೊಂಡಿದ್ದು, ಪರಿಸ್ಥಿತಿಯನ್ನು ನಿಗಾ ವಹಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಹಲವು ಪ್ರಕರಣಗಳು ಬಾಗಲಕೋಟೆ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದರಿಂದ ನಗರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿ ಪ್ರಕಾರ, ಮುತಾಲಿಕ್ ಮತ್ತು ಕೆರೇಹಳ್ಳಿ ಅವರ ಹಾಜರಾತಿ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿ ಸಾರ್ವಜನಿಕ ಶಾಂತಿ ಭಂಗಪಡಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

BNSS ಸೆಕ್ಷನ್ 163 ಅಡಿಯಲ್ಲಿ ಆದೇಶ

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಭಾರ್ತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) ಸೆಕ್ಷನ್ 163 ಅಡಿಯಲ್ಲಿ ಈ ಆದೇಶ ಹೊರಡಿಸಿದ್ದು, ಈ ಅವಧಿಯಲ್ಲಿ ಇಬ್ಬರೂ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉದ್ವೇಗಕಾರಿ ಭಾಷಣಗಳು ಸಮುದಾಯ ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ಈ ನಿರ್ಬಂಧ ವಿಧಿಸಲಾಗಿದೆ.

ಇದೇ ವೇಳೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಯಾವುದೇ ರೀತಿಯ ಉದ್ವಿಗ್ನ ಭಾಷಣಗಳು, ಪ್ರತಿಭಟನೆಗಳು ಹಾಗೂ ಕಾನೂನು ಉಲ್ಲಂಘನೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್