ಡಿಸಿಎಂ ಡಿಕೆ.ಶಿವಕುಮಾರ್ 
ರಾಜ್ಯ

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಚರ್ಚೆಯ ಹಂತದಲ್ಲಿದೆ; DCM ಡಿ.ಕೆ ಶಿವಕುಮಾರ್

ನಮ್ಮ ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವೆ. ಮೊಬೈಲ್‌ಗಳ ದುರುಪಯೋಗ ಹೇಗೆ ನಡೆಯುತ್ತಿದೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ಕುರಿತು ಚರ್ಚೆಗಳು ನಡೆಯುತ್ತಿವೆ.

ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪೋಷಕರಿಂದಲೂ ಒತ್ತಡವಿದ್ದು, ಅನೇಕ ದೇಶಗಳಲ್ಲಿ ಈ ಕ್ರಮವನ್ನು ಕೈಗೊಂಡಿದೆ. ಇಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ನಮ್ಮ ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವೆ. ಮೊಬೈಲ್‌ಗಳ ದುರುಪಯೋಗ ಹೇಗೆ ನಡೆಯುತ್ತಿದೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ಕುರಿತು ಚರ್ಚೆಗಳು ನಡೆಯುತ್ತಿವೆ. ಹಲವಾರು ದೇಶಗಳು ಮಕ್ಕಳಿಗೆ ಮೊಬೈಲ್ ನಿಷೇಧ ಮಾಡಿವೆ. ಈ ವಿಷಯ ಜಾಗತಿಕ ಮಟ್ಟದಲ್ಲಿಯೂ ಚರ್ಚೆಯಲ್ಲಿದೆ ಎಂದು ತಿಳಿಸಿದರು.

ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂದು ನೀಡಿರುವ ವರದಿ ಕುರಿತು ಪ್ರತಿಕ್ರಿಯಿಸಿ, ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ. ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಜಲ ಮಂಡಳಿಯಿಂದ ಶುದ್ಧಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನ‌ ಮಾಡಲು ಅಲ್ಲ ಎಂದು ಸ್ಪಷ್ಟಪಡಿಸಿದರು.

‘ವಿಬಿ ಜಿ ರಾಮ್ ಜಿ’ ಕಾಯ್ದೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಈ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಯಾವುದೇ ನಿರ್ದೇಶನವನ್ನೂ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!