ಡಿಕೆ ಶಿವಕುಮಾರ್ 
ರಾಜ್ಯ

ಸರ್ಕಾರಿ ಉದ್ಯೋಗ ಭರ್ತಿ ಆಗ್ತಿಲ್ಲ, ಅದಕ್ಕೆ ನಿರುದ್ಯೋಗಿಗಳಿಗೆ 3 ಸಾವಿರ ಕೊಡ್ತೀರೋದು: ಡಿ.ಕೆ ಶಿವಕುಮಾರ್; Video

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ.

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್‌ ಪ್ರತಿಭಟನೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಆಗಮಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ ಬೆಲ್ಲದ್‌, ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದರು. ನಗರದ ಶ್ರೀನಗರ ವೃತ್ತದಿಂದ ಆರಂಭವಾದ ಪ್ರತಿಭಟನೆ ಮಧ್ಯಭಾಗದಲ್ಲಿ ಹಾದುಬರುತ್ತಿದ್ದಂತೆ ಅವರನ್ನು ತಡೆಯಲು ಯತ್ನಿಸಿದಾಗ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತಳ್ಳಾಟ, ನೂಕಾಟ ನಡೆಯಿತು. ಇನ್ನು ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಉದ್ಯೋಗ ಸಿಗದಿದ್ದಕ್ಕೆ ನಾವು ಗ್ಯಾರಂಟಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 3 ಸಾವಿರ ರೂಪಾಯಿ ನೀಡುತ್ತಿದ್ದೇವೆ ಎಂದು ಹೇಳಿದರು.

ರೊಚ್ಚಿಗೆದ್ದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹಸಚಿವ ಡಾ.ಜಿ.ಪರಮೇಶ್ವರ್‌, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರ ಭಾವಚಿತ್ರಗಳನ್ನು ರಸ್ತೆ ಮಧ್ಯೆಯೇ ಧರಣಿ ಕುಳಿತು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಪೊಲೀಸರ ಅನುಮತಿಯನ್ನು ನಿರಾಕರಿಸಿ ಶ್ರೀನಗರ ವೃತ್ತದಿಂದ ವಿಚಿಗನ್‌ ಕಾಂಪೌಂಡ್‌ ನವರೆಗೆ ಪ್ರತಿಭಟನೆ ನಡೆಸಲು ಮುಂದಾದಾಗ ಭಾರೀ ನೂಕಾಟ ಉಂಟಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

AIADMKಯಿಂದ ಮತ್ತಷ್ಟು ಫ್ರೀಬೀಸ್ ಘೋಷಣೆ; ಪ್ರತಿ ಕುಟುಂಬಕ್ಕೆ 10,000 ರೂ. ನೆರವು!

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ; 15 ಲಕ್ಷ ರೂ ಪರಿಹಾರ ಘೋಷಣೆ

SCROLL FOR NEXT