ಜಿ ಪರಮೇಶ್ವರ 
ರಾಜ್ಯ

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1,600 ಹುದ್ದೆ ಶೀಘ್ರವೇ ಭರ್ತಿ: ಜಿ. ಪರಮೇಶ್ವರ

15 ಹೊಸ ತಾಲ್ಲೂಕುಗಳಲ್ಲಿ ಅಗ್ನಿ ಶಾಮಕ ಠಾಣೆಗಳನ್ನು ಸ್ಥಾಪಿಸಲು ಮುಖ್ಯಮಂತ್ರಿಯವರನ್ನು ಕೋರಿದ್ದೇನೆ. ಪೊಲೀಸ್ ಗೃಹ ಯೋಜನೆಯಡಿ 40 ಸಾವಿರ ಮನೆ ಕಟ್ಟಿದ್ದೇವೆ. ಅದೇ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಸತಿ ಗೃಹ ಕಲ್ಪಿಸುವ ತೀರ್ಮಾನ ಮಾಡಲಾಗಿದೆ.

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಅಧಿಕ ಹುದ್ದೆಗಳನ್ನು ತುಂಬುವ ಸಂಬಂಧ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ತರಬೇತಿ ಅಕಾಡಮಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆ, ಗೃಹರಕ್ಷಕ ದಳ, ಪೌರರಕ್ಷಣೆ ಮತ್ತು ಎಸ್ಡಿಆರ್ಎಫ್ ಅಧಿಕಾರಿ, ಸಿಬ್ಬಂದಿಗೆ 'ಮುಖ್ಯಮಂತ್ರಿಗಳ ಪದಕ' ಪ್ರದಾನ ಹಾಗೂ 40 ಹೊಸ ಅಗ್ನಿಶಾಮಕ ಜಲ ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡುತ್ತಿದ್ದರು.

15 ಹೊಸ ತಾಲ್ಲೂಕುಗಳಲ್ಲಿ ಅಗ್ನಿ ಶಾಮಕ ಠಾಣೆಗಳನ್ನು ಸ್ಥಾಪಿಸಲು ಮುಖ್ಯಮಂತ್ರಿಯವರನ್ನು ಕೋರಿದ್ದೇನೆ. ಪೊಲೀಸ್ ಗೃಹ ಯೋಜನೆಯಡಿ 40 ಸಾವಿರ ಮನೆ ಕಟ್ಟಿದ್ದೇವೆ. ಅದೇ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಸತಿ ಗೃಹ ಕಲ್ಪಿಸುವ ತೀರ್ಮಾನ ಮಾಡಲಾಗಿದೆ. ಇದಕ್ಕೆ ಹಣ ಒದಗಿಸಲಾಗುವುದು ಎಂದು ಗೃಹಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಬಹುಮಹಡಿ ಕಟ್ಟಡಗಳು ಹೆಚ್ಚಾಗುತ್ತಿವೆ. ಅಗ್ನಿ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ ನಿಯಂತ್ರಿಸಲು ಆಧುನಿಕ ಮತ್ತು ಸುಸಜ್ಜಿತ ಸಲಕರಣೆ, ವಾಹನಗಳನ್ನು ಒದಗಿಸಲಾಗಿದೆ. ಪ್ರಥಮ ಬಾರಿಗೆ 90 ಮೀಟರ್ ಎತ್ತರ ತಲುಪಬಲ್ಲ ಏರಿಯಲ್ ಲ್ಯಾಡರ್ ಫ್ಲಾಟ್ ಫಾರ್ಮ್ ವಾಹನ ಮಾದರಿ ಅಗ್ನಿಶಾಮಕ ವಾಹನವಾಗಿದೆ ಎಂದವರು ಹೇಳಿದರು.

15ನೇ ಹಣಕಾಸಿನ ಯೋಜನೆಯಡಿ 329 ಕೋಟಿ ರೂ. ಒದಗಿಸಲಾಗಿತ್ತು. 21 ಅಗ್ನಿಶಾಮಕ ಠಾಣೆ ನಿರ್ಮಿಸಲು 98 ಕೋಟಿ ರೂ. ಖರ್ಚು ಮಾಡಲಾಗಿದೆ. ಆಧುನಿಕ ಉಪಕರಣಗಳ ಖರೀದಿ, ತರಬೇತಿ ಕೇಂದ್ರದ ಉನ್ನತೀಕರಣಕ್ಕೆ ಕ್ರಮ ವಹಿಸಲಾಗಿದೆ ಎಂದವರು ತಿಳಿಸಿದರು.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯು ಉತ್ತಮ ಕೆಲಸದ ಮೂಲಕ ರಾಷ್ಟ್ರ ಮಟ್ಟದಲ್ಲಿ ಜನಮನ್ನಣೆ ಪಡೆದಿದೆ. ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶಿಸ್ತಿನ ಸಿಪಾಯಿಗಳು.

ಪೊಲೀಸ್ ಇಲಾಖೆಯ ಜೊತೆಜೊತೆಯಾಗಿ ಅಷ್ಟೇ ಶಿಸ್ತನ್ನು ಕಾಪಾಡಿಕೊಂಡು ಬಂದಿದ್ದೀರಿ. ವಿಪತ್ತಿನ ಸಂದರ್ಭದಲ್ಲಿ ಸ್ವಯಂಸ್ಪೂರ್ತಿಯಿಂದ ಕೆಲಸ ಮಾಡಲು ಶ್ರಮಿಸಲಾಗಿದೆ. ಇದನ್ನು ಸಮಾಜ ಗುರುತಿಸಿದೆ. ಇಡೀ ದೇಶದಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ಇತರೆ ಇಲಾಖೆಗಳು ಮಾದರಿಯಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ