ದೇಶ ವಿರೋಧಿ ಕೃತ್ಯ ಖಂಡಿಸಿ ಎಬಿವಿಪಿ ಪ್ರತಿಭಟನೆ 
ರಾಜ್ಯ

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ದೇಶವಿರೋಧಿ ಚಟುವಟಿಕೆ ಆರೋಪ: ABVP ಪ್ರತಿಭಟನೆ; ವಿವಿ ಮಾನ್ಯತೆ ರದ್ದು ಗೊಳಿಸುವಂತೆ ಅಮಿತ್ ಶಾಗೆ ಪತ್ರ!

ಕಾಶ್ಮೀರ ಭಾರತದ ಭೂಭಾಗವಲ್ಲ, ಭಾರತದವರು ಅಲ್ಲಿಗೆ ಹೋಗಿ ದೌರ್ಜನ್ಯ ಎಸಗುತ್ತಿದ್ದಾರೆ. ಸೈನಿಕರು ಅಲ್ಲಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಹೇಳಿಕೆಗಳನ್ನು ಸ್ಪಾರ್ಕ್ ಸಂಘಟನೆಯವರು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: ಆನೇಕಲ್ ಬಳಿಯಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಎಬಿವಿಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಉಂಟಾಗಿ, ಪೊಲೀಸರು 21 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

1991 ರ ಕುನಾನ್ ಪೋಷ್ಪೋರಾ ಘಟನೆಯನ್ನು ಚರ್ಚಿಸಲು ನಡೆಸಲಾಗಿದೆ ಎನ್ನಲಾದ ಕಾರ್ಯಕ್ರಮದ ವಿರುದ್ಧ ಈ ಪ್ರತಿಭಟನೆ ನಡೆಯಿತು. ಎಬಿವಿಪಿ ಕಾರ್ಯಕರ್ತರು ವಿಧ್ವಂಸಕ ಕೃತ್ಯ ಎಸಗಿದ್ದಾರೆಂದು ವರದಿಯಾದ ನಂತರ, ಸರ್ಜಾಪುರ ಪೊಲೀಸರು ಹಲವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದರು.

ಸ್ಪಾರ್ಕ್ ಎಂಬ ಸಂಘಟನೆಯು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮವನ್ನು ನಡೆಸಿತು ಎಂದು ಎಬಿವಿಪಿ ತಿಳಿಸಿದೆ. ಕುನಾನ್ ಪೋಷ್ಪೋರಾ ಪ್ರಕರಣವನ್ನು ಚರ್ಚಿಸಲು ಈ ಕಾರ್ಯಕ್ರಮವನ್ನು ನಡೆಸಲಾಗಿತ್ತು, ಅಜೀಂ ಪ್ರೇಮ್ ಜೀ ಯೂನಿವರ್ಸಿಟಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಸ್ಪಾರ್ಕ್ ಎನ್ನುವ ಸಂಘಟನೆಯ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡಲಾಗುತ್ತಿದೆ ಎಂದು ಎಬಿವಿಪಿ ಸಂಘಟನೆ ಆರೋಪಿಸಿದೆ.

ಕಾಶ್ಮೀರ ಭಾರತದ ಭೂಭಾಗವಲ್ಲ, ಭಾರತದವರು ಅಲ್ಲಿಗೆ ಹೋಗಿ ದೌರ್ಜನ್ಯ ಎಸಗುತ್ತಿದ್ದಾರೆ. ಸೈನಿಕರು ಅಲ್ಲಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಹೇಳಿಕೆಗಳನ್ನು ಸ್ಪಾರ್ಕ್ ಸಂಘಟನೆಯವರು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ವಿಶ್ವವಿದ್ಯಾಲಯದ ಅಧಿಕಾರಿಗಳು ಆರೋಪಗಳನ್ನು ನಿರಾಕರಿಸಿದ್ದಾರೆ. ಈ ರೀತಿಯ ಯಾವುದೇ ಕಾರ್ಯಕ್ರಮಕ್ಕೆ ವಿವಿ ಅನುಮತಿ ನೀಡಿಲ್ಲ ಎಂದು ಹೇಳಿದರು. "ನಮ್ಮ ಕ್ಯಾಂಪಸ್‌ಗೆ ಬಲವಂತವಾಗಿ ಪ್ರವೇಶಿಸಿ ನಮ್ಮ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದರು ಎಂದಿದ್ದಾರೆ.

ವಿದ್ಯಾಲಯವು ಕ್ಯಾಂಪಸ್‌ನಲ್ಲಿ ಯಾವುದೇ ಕಾರ್ಯಕ್ರಮ ನಡೆಸುವ ಮೊದಲು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸುತ್ತದೆ. ಪ್ರತಿಭಟನಾಕಾರರು ಆರೋಪಿಸುತ್ತಿರುವ ರೀತಿಯ ಕಾರ್ಯಕ್ರಮ ನಡೆಯಲೇ ಇಲ್ಲ ಎಂದು ವಿವಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರದರ್ಶನದ ಸಮಯದಲ್ಲಿ, ಎಬಿವಿಪಿ ಕಾರ್ಯಕರ್ತರು ವಿಶ್ವವಿದ್ಯಾಲಯದ ವಿರುದ್ಧ ಘೋಷಣೆಗಳನ್ನು ಕೂಗಿದರು, ಫಲಕಗಳು ಮತ್ತು ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದರು. ಪ್ರತಿಭಟನೆಯ ಸಂಕೇತವಾಗಿ ವಿಶ್ವವಿದ್ಯಾಲಯದ ನಾಮಫಲಕಕ್ಕೆ ಕಪ್ಪು ಶಾಯಿಯನ್ನು ಬಳಿದರು. ನಂತರ ಕೆಲವು ಕಾರ್ಯಕರ್ತರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸಲು ಪ್ರಯತ್ನಿಸಿದರು ಎಂದು ತಿಳಿಸಿದೆ.

ವಿಧ್ವಂಸಕ ಘಟನೆಗಳ ನಂತರ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿ ಎಬಿವಿಪಿ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದರು. ಈ ಸಮಯದಲ್ಲಿ, ಕೆಲವು ವಿದ್ಯಾರ್ಥಿಗಳು ಎಬಿವಿಪಿ ಕಾರ್ಯಕರ್ತರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಏತನ್ಮಧ್ಯೆ, ವಿಶ್ವವಿದ್ಯಾನಿಲಯ ಸಮುದಾಯದ ವಾಟ್ಸಾಪ್ ಗುಂಪುಗಳಲ್ಲಿ ಪ್ರಸಾರವಾದ ಸಂದೇಶಗಳು ಕ್ಯಾಂಪಸ್‌ನ ಹೊರಗೆ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ವಿದ್ಯಾರ್ಥಿಗಳನ್ನು ಎಚ್ಚರಿಸಿ, ಅವರು ಒಳಾಂಗಣದಲ್ಲಿಯೇ ಇರುವಂತೆ ಹಾಗೂ ಹೊರಗಿನ ಯಾರೊಂದಿಗೂ ಸಂವಹನ ನಡೆಸದಂತೆ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.

ಸ್ಪಾರ್ಕ್ ಸಂಘಟನೆಗೆ ನಿಷೇಧ ಹೇರಬೇಕು ಮತ್ತು ವಿಶ್ವವಿದ್ಯಾಲಯ ಕ್ಷಮೆಯಾಚಿಸಬೇಕು ಎಂದು ಎಬಿವಿಪಿ ಆಗ್ರಹಿಸಿದೆ. ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರವನ್ನೂ ಬರೆದಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಚಂದ್ರಕಾಂತ್ ಎಂವಿ, 18 ಸದಸ್ಯರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಮತ್ತು ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಟಿಎನ್‌ಐಇಗೆ ತಿಳಿಸಿದರು.

ಫೆಬ್ರವರಿ 24 ರ ಸಂಜೆ 6 ಗಂಟೆ ಸುಮಾರಿಗೆ, 20 ಜನರ ಗುಂಪು ಬೆಂಗಳೂರಿನಲ್ಲಿರುವ ನಮ್ಮ (ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ) ಕ್ಯಾಂಪಸ್‌ಗೆ ಬಲವಂತವಾಗಿ ನುಗ್ಗಿತು. ಅವರು ಘೋಷಣೆಗಳನ್ನು ಕೂಗಿದರು, ಕೆಲವು ಆಸ್ತಿಗಳನ್ನು ಧ್ವಂಸ ಮಾಡಿದರ. ನಮ್ಮ ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದರು. ನಾವು ಘಟನೆಯ ಬಗ್ಗೆ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ವರದಿ ಮಾಡಿದೆವು. ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ಅವರನ್ನು ಸುತ್ತುವರಿದರು. ಈ ಬಾಹ್ಯ ಜನರ ಗುಂಪು ನಮ್ಮ ಕ್ಯಾಂಪಸ್‌ನಲ್ಲಿ ನಡೆಸಿದ ಗದ್ದಲ ಮತ್ತು ಹಿಂಸಾಚಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ" ಎಂದು ವಿಶ್ವವಿದ್ಯಾನಿಲಯವು ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 35 ಮಿ. ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

SCROLL FOR NEXT