ಮಲ್ಲಿಕಾರ್ಜುನ ಮುತ್ಯಾ 
ರಾಜ್ಯ

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಆಯೋಗ ಈ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ.

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಆಯೋಗ ಈ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲಾಗಿದ್ದು, ಯಾದಗಿರಿ ಎಸ್‌ಪಿಗೆ ಪತ್ರ ಬರೆದಿರುವ ಆಯೋಗ, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದೆ.

ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್​ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರಿದೆ. ಪೊಲೀಸ್​​ ಇಲಾಖೆ ನೀಡುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳೋದಾಗಿ ಆಯೊಗದ ಅಧ್ಯಕ್ಷ ಶಶಿಧರ್ ಕೋಸುಂಬೆ ತಿಳಿಸಿದ್ದಾರೆ.

ವಿಡಿಯೋದಲ್ಲೇನಿದೆ?

ವೈರಲ್ ಆಗಿರುವ ವಿಡಿಯೋದಲ್ಲಿ ಮಲ್ಲಿಕಾರ್ಜುನ ಮುತ್ಯಾ ಬೆಡ್ ಮೇಲೆ ಕುಳಿತು ಅಪ್ರಾಪ್ತ ಬಾಲಕಿಯನ್ನು ಮಲಗಿಸಿಕೊಂಡಿರುವ ದೃಶ್ಯವಿದೆ. ಈ ವೇಳೆ ಬಾಲಕಿಗೆ ಮುತ್ತು ಕೊಡುತ್ತಾ ಅನುಚಿತವಾಗಿ ವರ್ತಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಷ್ಟೇ ಅಲ್ಲದೆ, ಮತ್ತೊಂದು ವಿಡಿಯೋದಲ್ಲಿ ಅದೇ ಬಾಲಕಿಯೊಂದಿಗೆ ಬಲವಂತವಾಗಿ ನೃತ್ಯ ಮಾಡುತ್ತಾ, ಬಾಲಕಿಯ ಜಡೆ ಎಳೆಯುವುದು, ಮುದ್ದಾಡುವುದು ಬಾಲಕಿಯೊಂದಿಗೆ ವಿಕೃತವಾಗಿ ವರ್ತಿಸಿರುವ ದೃಶ್ಯಗಳು ಕಂಡುಬಂದಿವೆ. ಈ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಯಾರು ಈ ಮುತ್ಯಾ?

ಉತ್ತರ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ರೋಜಾ ಮಹೆಲ್ ಗ್ರಾಮದಲ್ಲಿ ವಾಸವಿರುವ 26 ವರ್ಷ ಆಸುಪಾಸಿನ ಈ ವ್ಯಕ್ತಿ ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಬಹಳ ಪ್ರಸಿದ್ಧಿ ಪಡೆದಿದ್ದಾರೆ.

ಉತ್ತರ ಕರ್ನಾಟಕದ ಅನೇಕ ಭಕ್ತರು ಇವರನ್ನು ಅಪ್ಪಾಜಿ ಅಥವಾ ನಡೆದಾಡುವ ದೇವರು ಎಂದು ನಂಬಿ ಗೌರವಿಸುತ್ತಾರೆ. ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಮುತ್ಯಾ, ಅಪಾರ ಅನುಯಾಯಿಗಳನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel