ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಎಲ್ಲ 7 ದಿನಗಳ ಮತ್ತು 15 ದಿನಗಳ ನೋಟಿಸ್‌ ಅವಧಿ ಹೊಂದಿರುವ ಮ್ಯುಟೇಶನ್‌ಗಳನ್ನು ನೋಟಿಸ್ ಅವಧಿ ಮುಕ್ತಾಯವಾದ ನಂತರ ಮಾನವ ಹಸ್ತಕ್ಷೇಪವಿಲ್ಲದೆ ಸ್ವಯಂ ಚಾಲಿತ ತಂತ್ರಾಂಶದ ಮೂಲಕ ಸರ್ವರ್ ಸಹಿ ಇರುವ ಮ್ಯುಟೇಷನ್‌ ಪಡೆಯಬಹುದಾಗಿದೆ.

ಬೆಂಗಳೂರು: ಕೃಷಿ ಭೂಮಿ ಸೇರಿದಂತೆ ಯಾವುದೇ ಸ್ವತ್ತಿಗೆ ಸ್ವಯಂ ಚಾಲಿತವಾಗಿ ಮ್ಯುಟೇಷನ್‌ ಪಡೆಯಬಹುದಾದ ಹೊಸ ವ್ಯವಸ್ಥೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಂಗಳವಾರ ಚಾಲನೆ ನೀಡಿದರು.

ಎಲ್ಲ 7 ದಿನಗಳ ಮತ್ತು 15 ದಿನಗಳ ನೋಟಿಸ್‌ ಅವಧಿ ಹೊಂದಿರುವ ಮ್ಯುಟೇಶನ್‌ಗಳನ್ನು ನೋಟಿಸ್ ಅವಧಿ ಮುಕ್ತಾಯವಾದ ನಂತರ ಮಾನವ ಹಸ್ತಕ್ಷೇಪವಿಲ್ಲದೆ ಸ್ವಯಂ ಚಾಲಿತ ತಂತ್ರಾಂಶದ ಮೂಲಕ ಸರ್ವರ್ ಸಹಿ ಇರುವ ಮ್ಯುಟೇಷನ್‌ ಪಡೆಯಬಹುದಾಗಿದೆ.

ಒಂದು ವೇಳೆ 7 ಕೆಲಸದ ದಿನಗಳು ಅಥವಾ 15 ಕೆಲಸದ ದಿನಗಳ ನೋಟಿಸ್‌ ಅವಧಿಯೊಳಗೆ ಕಂದಾಯ ನಿರೀಕ್ಷಕರು (ಸರ್ಕಾರಿ ಆಕ್ಷೇಪ) ಅಥವಾ ಸಾರ್ವಜನಿಕರು ತಕರಾರು ಸಲ್ಲಿಸಿದರೆ, ಅಂತಹ ಮ್ಯುಟೇಶನ್‌ಗಳನ್ನು ಪೂರ್ಣಗೊಳಿಸದೆ, ಆರ್‌ಸಿಸಿಎಂಎಸ್‌ ತಂತ್ರಾಂಶದ ಮೂಲಕ ತಹಶೀಲ್ದಾರ್‌ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಲಾಗುತ್ತದೆ. ತಹಶೀಲ್ದಾರರ ನಿರ್ಧಾರದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಈ ಹಿಂದೆ ಮ್ಯುಟೇಶನ್‌ಗಳಿಗೆ ಆಕ್ಷೇಪಣೆ ಇದ್ದಲ್ಲಿ ಅಥವಾ ಅನುಮೋದನೆ ನೀಡಬೇಕಾದಲ್ಲಿ, ರಾಜಸ್ವ ನಿರೀಕ್ಷಕರು ಖುದ್ದಾಗಿ ತಾಲ್ಲೂಕು ಕಚೇರಿಗಳಿಗೆ ಬಂದು ಸಲ್ಲಿಸಬೇಕಾಗಿತ್ತು. ಈಗ ರಾಜಸ್ವ ನಿರೀಕ್ಷಕರಿಗೆ ಲಾಗಿನ್‌ ನೀಡಿದ್ದು, ಯಾವುದೇ ಸ್ಥಳದಿಂದ ಆಕ್ಷೇಪಣೆ ಸಲ್ಲಿಸಲು ತಂತ್ರಾಂಶದಲ್ಲಿ ಅವಕಾಶ ನೀಡಲಾಗಿದೆ.

ಈ ಹೊಸ ವ್ಯವಸ್ಥೆಯಿಂದ ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆ ಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ. ಈ ಸೇವೆಯನ್ನು ಒಂದು ತಿಂಗಳಿನಿಂದ ಮಂಡ್ಯದಲ್ಲಿ ಅನುಷ್ಠಾನಗೊಳಿಸಿ, ಸಾಧಕ–ಬಾಧಕ ಪರಿಶೀಲಿಸಿದ್ದೇವೆ. ಇವತ್ತಿನಿಂದಲೇ ಶೇ 98 ರಷ್ಟು ಎಲ್ಲಾ ಖಾತೆ ಬದಲಾವಣೆಗಳೂ ಸ್ವಯಂ ಚಾಲಿತಗೊಳ್ಳಲಿವೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

‘2024ನೇ ಏಪ್ರಿಲ್‌ 1ರಿಂದ 2026ರ ಫೆಬ್ರುವರಿ 20ರವರೆಗಿನ ಅವಧಿಯಲ್ಲಿ 35,11,987 ಖಾತೆ ಬದಲಾವಣೆಯನ್ನು ಸ್ವಯಂ ಚಾಲಿತವಾಗಿ ಮಾಡಿದ್ದೇವೆ. ಖಾತೆ ಬದಲಾವಣೆಗೆ ಮೊದಲೆಲ್ಲಾ ಕಂದಾಯ ನಿರೀಕ್ಷರು ಕಚೇರಿಗೆ ಬಂದು ಬೆರಳಚ್ಚು ಕೊಡುವವರೆಗೆ ಈ ಕೆಲಸಗಳು ಆಗುತ್ತಿರಲಿಲ್ಲ. ಆದರೆ, ಈಗ ಅಧಿಕಾರಿಗಳ ಡಿಜಿಟಲ್‌ ಸಹಿಯ ಮೂಲಕ ಎಲ್ಲ ಕೆಲಸವೂ ಆನ್‌ಲೈನ್‌ನಲ್ಲೇ ಆಗುತ್ತಿದೆ. ಖಾತೆ ಬದಲಾವಣೆ ಮತ್ತು ತಕರಾರು ಸಲ್ಲಿಸಲು ಅಧಿಕಾರಿಗಳು ಕಚೇರಿಗೆ ಬರುವ ಅಗತ್ಯವೂ ಇಲ್ಲ. ಅವರ ಸಮಯವೂ ಉಳಿಯುತ್ತದೆ’ ಎಂದು ಅವರು ಹೇಳಿದರು.

ಪಹಣಿ ಜತೆ ಆಧಾರ್‌ ಜೋಡಣೆಯಾದರೆ ಪಹಣಿಯಲ್ಲಿ ಏನೇ ಬದಲಾವಣೆ ಆದರೂ ಆ ಸಂದೇಶವನ್ನು ಆಸ್ತಿ ಮಾಲಿಕರ ಮೊಬೈಲ್‌ಗೆ ಕಳಿಸಲಾಗುತ್ತದೆ. ಆಗ ಆಸ್ತಿ ಮಾಲೀಕರ ಗಮನಕ್ಕೆ ಬಾರದೆ ನಡೆಯುವ ಖಾತೆ ಬದಲಾವಣೆ ಅಥವಾ ಮಾರಾಟವನ್ನು ತಡೆಯಬಹುದು. ಆ ಮೂಲಕ ಆಸ್ತಿ ಮಾಲೀಕತ್ವಕ್ಕೆ ಖಾತರಿ ಪಡೆಯಬಹುದು. ಅಲ್ಲದೇ, ನ್ಯಾಯಾಲಯ ಆದೇಶ ನಮೂದಿಸಿದರೆ ಅಥವಾ ಪಹಣಿಯಲ್ಲಿ ಬೇರೆಯವರ ಹೆಸರು ಸೇರಿಸಿದರೂ ಎಸ್‌ಎಂಎಸ್‌ ಮೂಲಕ ಮಾಹಿತಿ ಬರುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್!

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್: ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3!

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ: ಹರಿಯಾಣದ 5 ​​ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ!

ಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!

SCROLL FOR NEXT