ಸಚಿವ ಶಿವಾನಂದ ಪಾಟೀಲ್ 
ರಾಜ್ಯ

ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ 300 ಕೋಟಿ ರೂ ಬಿಡುಗಡೆ; ಪ್ರತಿ ಟನ್‌ಗೆ 50 ರೂ ನೇರ ವರ್ಗಾವಣೆ

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ಗೆ 50 ರೂ. ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರವು 2025-26ರ ಹಂಗಾಮಿಗೆ ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಆರ್ಥಿಕ ಸಹಾಯವನ್ನು ಬಿಡುಗಡೆ ಮಾಡಿದೆ.

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ಗೆ 50 ರೂ. ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.

ಕಳೆದ ನವೆಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್‌ ಕಬ್ಬಿಗೆ ಎಫ್‌ಆರ್‌ಪಿ ಮೇಲೆ 100 ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.

ಈ 100 ರೂ. ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳು 50 ರೂ. ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಅದರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ 300 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಕ್ಕರೆ ಸಚಿವರು ಮಾಹಿತಿ ನೀಡಿದ್ದಾರೆ.

"ರಾಜ್ಯ ಸರ್ಕಾರ ಘೋಷಿಸಿದಂತೆ, 2025-26 ರ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ಗೆ 50 ರೂ.ಗಳಂತೆ ಆರ್ಥಿಕ ಸಹಾಯವಾಗಿ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ" ಎಂದು ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಪ್ರತಿ ಟನ್‌ಗೆ 50 ರೂಪಾಯಿಯಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್‌ ಕಬ್ಬಿಗೆ 50 ರೂ. ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!