ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ: ನಿಮ್ಮೊಂದಿಗೆ ನಾನಿದ್ದೇನೆ, ಪ್ರತಿಭಟನಾಕಾರರಿಗೆ HDK ಅಭಯ ಹಸ್ತ!

ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್‌‌ʼಫಾಸ್ಟ್ ಆಗಿ ಭರ್ತಿ ಆಗುತ್ತಿವೆ. ಕಾಂಗ್ರೆಸ್ ಸರ್ಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ.

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ನಿರುದ್ಯೋಗಿ ಯುವಜನರ ಪ್ರತಿಭಟನೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ. ಯುವಜನರಿಗೆ ನನ್ನ ಮನವಿ ಇಷ್ಟೇ, ನಿಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ವಿಶ್ವಾಸ ತುಂಬಿದ್ದಾರೆ.

ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್‌‌ʼಫಾಸ್ಟ್ ಆಗಿ ಭರ್ತಿ ಆಗುತ್ತಿವೆ. ಕಾಂಗ್ರೆಸ್ ಸರ್ಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ.

ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಂತೆ ರಾಜ್ಯದಲ್ಲಿ 7 ಲಕ್ಷ ನಿರುದ್ಯೋಗಿಗಳಿದ್ದಾರೆ. ಇವರೆಲ್ಲರೂ ಸರಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದು, ಖಾಲಿ ಹುದ್ದೆಗಳನ್ನು ಸರಕಾರ ಹಂತ ಹಂತವಾಗಿ ಭರ್ತಿ ಮಾಡಬೇಕಿತ್ತು. ಕುರ್ಚಿ ತಿಕ್ಕಾಟದಲ್ಲಿ ಅಮೂಲ್ಯವಾದ 3 ವರ್ಷಗಳನ್ನು ಪೋಲು ಮಾಡಿದೆ. ಯುವಜನರತ್ತ ಗಮನ ಹರಿಸಲು ಈ ಸರಕಾರಕ್ಕೆ ಟೈಮಿಲ್ಲ ಎಂದು ಲೇವಡಿ ಮಾಡಿದ್ದಾರೆ.

ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ ಎಂಬುದನ್ನು ಸರಕಾರ ಮರೆಯಬಾರದು. ಈ ಹೊತ್ತಿಗೇ ಆಡಳಿಗಾರರು ಎಚ್ಚೆತ್ತು ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇರಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ಅತಿ ಹೆಚ್ಚು ಹುದ್ದೆಗಳು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇವೆ. ಬೆಂಗಳೂರು ನಗರದ 18 ಆಯಕಟ್ಟಿನ ಪೊಲೀಸ್‌ ಠಾಣೆಗಳಲ್ಲಿ ಇನ್‌ ಸ್ಪೆಕ್ಟರ್‌ ಗಳೇ ಇಲ್ಲ! ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗಿದ್ದರ ಪರಿಣಾಮವಿದು.

ಇದೆಲ್ಲವೂ ಆಡಳಿತದ ಮೇಲೆ ನೇರವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಕೂಡಲೇ ಖಾಲಿ ಹುದ್ದೆಗಳ ಭರ್ತಿ ಮಾಡುವ ನಿಟ್ಟಿನಲ್ಲಿ ಸರಕಾರ ತುರ್ತು ಕ್ರಮ ವಹಿಸಬೇಕು. ವಿಧಾನಸೌಧದ 3ನೇ ಮಹಿಡಿಯಿಂದ ಕೆಳಗಿಳಿದು ಬಂದು ಯುವಜನರ ದನಿ ಆಲಿಸಬೇಕು. ಇಲ್ಲವಾದರೆ, ಇವರ ಆಕ್ರೋಶಕ್ಕೆ ಕಾಂಗ್ರೆಸ್‌ ಸರಕಾರ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 35 ಮಿ. ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

SCROLL FOR NEXT