ಧಾರವಾಡದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದರು. 
ರಾಜ್ಯ

ಧಾರವಾಡದಲ್ಲಿ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದವರ ವಿರುದ್ಧ ಕ್ರಮ: ಆಯುಕ್ತ ಶಶಿಕುಮಾರ್

ಐದು ಡ್ರೋನ್‌ಗಳು ಮತ್ತು 20 ಕ್ಕೂ ಹೆಚ್ಚು ಖಾಸಗಿ ವಿಡಿಯೋಗ್ರಾಫರ್‌ಗಳು ಪ್ರತಿಭಟನೆಯನ್ನು ಚಿತ್ರೀಕರಿಸಿದ್ದಾರೆ. ನಮ್ಮ ಬಳಿ ಸಿಸಿಟಿವಿ ದೃಶ್ಯಾವಳಿಗಳೂ ಇವೆ. ಕಾನೂನು ಉಲ್ಲಂಘನೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಧಾರವಾಡ: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಭಾರೀ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಡೆದ ಭಾರೀ ಪ್ರತಿಭಟನೆ ನಂತರ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಅವರಿಗೆ ಪ್ರತಿಭಟನೆಗೆ ಅನುಮತಿ ನೀಡಿದ್ದ ಸ್ಥಳದಿಂದ ಬೇರೆ ಕಡೆ ಪ್ರತಿಭನೆ ಮಾಡಿದ್ದರು. ಜುಬಿಲಿ ಸರ್ಕಲ್ ನ್ನು ತಡೆದಿದ್ದರು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯುಂಟಾಗಿತ್ತು.

ಐದು ಡ್ರೋನ್‌ಗಳು ಮತ್ತು 20 ಕ್ಕೂ ಹೆಚ್ಚು ಖಾಸಗಿ ವಿಡಿಯೋಗ್ರಾಫರ್‌ಗಳು ಪ್ರತಿಭಟನೆಯನ್ನು ಚಿತ್ರೀಕರಿಸಿದ್ದಾರೆ. ನಮ್ಮ ಬಳಿ ಸಿಸಿಟಿವಿ ದೃಶ್ಯಾವಳಿಗಳೂ ಇವೆ. ಕಾನೂನು ಉಲ್ಲಂಘನೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಪ್ರತಿಭಟನಾಕಾರರು ನಿಗದಿತ ಮಾರ್ಗದಲ್ಲೇ ಸಾಗುವಂತೆ ಮಾಡಲು ನಾಲ್ಕರಿಂದ ಐದು ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಕೆಲವರು ಅವನ್ನು ತಳ್ಳಿಹಾಕಿ ಮುಂದೆ ಸಾಗಿದ್ದು, ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ, ಈ ಗಲಾಟೆಯಲ್ಲಿ ಕೆಲ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದರು.

ಕೆಲವರು ಹಿಂದೆಯೂ ನಿಯಮ ಉಲ್ಲಂಘನೆ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರೆಂಬುದು ನಮಗೆ ಗೊತ್ತಾಗಿದೆ. ಪ್ರತಿಭಟನೆ ವೇಳೆ ನೀರಿನ ಬಾಟಲಿಗಳನ್ನು ಎಸೆದಿರುವುದಕ್ಕೂ ಸಾಕ್ಷ್ಯಗಳಿವೆ. ಆದರೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದರು.

ಬಿಜೆಪಿ ಪ್ರತಿಭಟನಾ ರ್ಯಾಲಿಗೆ ಶ್ರೀನಗರ ಸರ್ಕಲ್‌ನಿಂದ ಮಿಷಿಗನ್ ಕಾಂಪೌಂಡ್‌ವರೆಗೆ ಅನುಮತಿ ನೀಡಲಾಗಿತ್ತು, ಆದರೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ಪ್ರತಿಭಟನೆಗೆ ಅನುಮತಿ ನೀಡಲಾಗಿರಲಿಲ್ಲ, ಅವರು ಬಿಜೆಪಿ ಜೊತೆ ಸೇರಿ ಪ್ರತಿಭಟನೆಯಲ್ಲಿ ಭಾಗವಹಿಸಿದರು ಎಂದು ಶಶಿ ಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT