ವಿದ್ಯಾ ಜ್ಯೋತಿ 
ರಾಜ್ಯ

ನೀನು ಅಲ್ಪಾಯುಷಿ: ಬೆಂಗಳೂರಿನ ಜ್ಯೋತಿಷಿ ಮಾತು ಕೇಳಿ ಕೆಟ್ಟ ಟೆಕ್ಕಿ; ನೇಣು ಬಿಗಿದುಕೊಂಡು ಆತ್ಮಹತ್ಯೆ!

ಕೊಡಗು ಮೂಲದ ಯುವಕನನ್ನ ಪ್ರೀತಿಸುತ್ತಿದ್ದ ವಿದ್ಯಾ ಇಷ್ಟದಂತೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿ, ಮದುವೆ ಮಾಡಿಕೊಡಲು ಒಪ್ಪಿಕೊಂಡಿದ್ದರು.

ಬೆಂಗಳೂರು: ಜ್ಯೋತಿಷಿಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.

ವಿದ್ಯಾಜ್ಯೋತಿ (29) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ವರ್ಕ್ ಫ್ರಂ ಹೋಮ್ ನಲ್ಲಿದ್ದರು ಎಂದು ತಿಳಿದುಬಂದಿದೆ. ಮೃತ ವಿದ್ಯಾಜ್ಯೋತಿಗೆ ಜ್ಯೋತಿಷಿಯೊಬ್ಬರು ನೀನು ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದರಂತೆ.

ಕೊಡಗು ಮೂಲದ ಯುವಕನನ್ನ ಪ್ರೀತಿಸುತ್ತಿದ್ದ ವಿದ್ಯಾ ಇಷ್ಟದಂತೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿ, ಮದುವೆ ಮಾಡಿಕೊಡಲು ಒಪ್ಪಿಕೊಂಡಿದ್ದರು. ಜ್ಯೋತಿಷಿ 9 ದಿನ ಪೂಜೆ ಮಾಡಲು ಸೂಚಿಸಿದ್ದರು. ಅದರಂತೆ ಮನೆಯಲ್ಲಿ ಒಂಬತ್ತನೇ ದಿನದ ಪೂಜೆ ಮನೆಯಲ್ಲಿ ನಡೆಯುತ್ತಿತ್ತು. ಕೊನೆಯ ದಿನವಾದ್ದರಿಂದ ಮಾರಮ್ಮ ದೇವರಿಗೆ ತಾಳಿ ಕೊಡುವಂತೆ ಜ್ಯೋತಿಷಿ ತಿಳಿಸಿದ್ದರು.

ಮನೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಊಟದ ನಂತರ ವಿದ್ಯಾ ರೂಂಗೆ ಹೋಗಿದ್ದಳು. ಸಂಜೆ ತಾಯಿ ಕೂಗಿದ್ದರೂ ಕೂಡ ವಿದ್ಯಾ ಹೊರಬಂದಿರಲಿಲ್ಲ. ಕೆಲಸ ಮಾಡುತ್ತಿರಬೇಕೆಂದು ಎಲ್ಲರೂ ಸುಮ್ಮನಾಗಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ತಾಯಿ ದೇವಸ್ಥಾನಕ್ಕೆ ತೆರಳಲು ವಿದ್ಯಾಳನ್ನು ಕರೆದಿದ್ದರು.

ಬಾಗಿಲನ್ನು ತೆಗೆಯದೇ ಇದ್ದಾಗ ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನ ವಿಕ್ಟೋರಿಯಾ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಯನಾಡು: ಭೂ ಕುಸಿತದ ರಭಸಕ್ಕೆ ಕೊಚ್ಚಿ ಬಂದ ಟ್ಯಾಂಕರ್! ನದಿಗೆ ಬಿದ್ದ ಖಾಸಗಿ ಬಸ್, ಓರ್ವ ಸಾವು, ಏಳು ಮಂದಿಗೆ ಗಾಯ, ಭಯಾನಕ Video

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿದ ಭಾರತೀಯ ಸೇನೆ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ!

ಮೆಲೋನಿ ರಾಣಿ, ಅವರ ಪಾಡಿಗೆ ಅವ್ರನ್ನ ಬಿಟ್ಟುಬಿಡಿ: ಟ್ರಂಪ್‌ಗೆ ಮಿತ್ರರಾಷ್ಟ್ರ ಬೆಲ್ಜಿಯಂ ರಕ್ಷಣಾ ಸಚಿವರ ಖಡಕ್ ವಾರ್ನಿಂಗ್!

ರಾಮ ಮಂದಿರ ಟ್ರಸ್ಟ್‌ನಲ್ಲಿ 30 ಕೆಜಿಗೂ ಹೆಚ್ಚು ಚಿನ್ನದ ವಸ್ತುಗಳು, ದಾನ ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳು ಸುರಕ್ಷಿತ: ಖಜಾಂಚಿ ಗೋವಿಂದ್ ದೇವ್ ಗಿರಿ