ಮೃತಪಟ್ಟ ಮುನಿರಾಜು ಹಾಗೂ ಆತನ ಪತ್ನಿ ಸುನೀತಾ 
ರಾಜ್ಯ

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಆಗಾಗ್ಗೆ ಜಗಳ; ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಲೆ ಮಾಡಿರುವ ಶಂಕೆ

ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದಲ್ಲಿ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಫೆಬ್ರವರಿ 28ರಂದು ಬೆಳಿಗ್ಗೆ ಮುನಿರಾಜು ಅವರ ಮೃತದೇಹ ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಿಕ್ಕಬಳ್ಳಾಪುರ: ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕಿದ್ದು, ಸಾಕಷ್ಟು ಅನುಮಾನ ಹುಟ್ಟಿಹಾಕಿದೆ.

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡನೋ ಅಥವಾ ಆತನ ಪತ್ನಿಯೇ ಅವನ ಕೊಲೆ ಮಾಡಿದ್ದಾಳೋ ಎಂಬೆಲ್ಲಾ ಅನುಮಾನಗಳು ಉಂಟಾಗಿದ್ದು, ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದಲ್ಲಿ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಫೆಬ್ರವರಿ 28ರಂದು ಬೆಳಿಗ್ಗೆ ಮುನಿರಾಜು ಅವರ ಮೃತದೇಹ ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ, ಘಟನೆಯ ಸುತ್ತಮುತ್ತಲಿನ ಸನ್ನಿವೇಶಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಮುನಿರಾಜು ಅವರ ಸಾವಿಗೆ ಅವರ ಪತ್ನಿ ಸುನಿತಾ ಅವರ ಅಕ್ರಮ ಸಂಬಂಧವೇ ಕಾರಣ ಎಂಬ ಆರೋಪ ಕೇಳಿಬರುತ್ತಿದೆ. ಸ್ಥಳೀಯರ ಮತ್ತು ಕುಟುಂಬಸ್ಥರ ಮಾಹಿತಿ ಪ್ರಕಾರ, ಸುನಿತಾ ಪದೇ ಪದೇ ಮನೆ ಬಿಟ್ಟು ಬೇರೊಬ್ಬ ವ್ಯಕ್ತಿಯ ಜೊತೆ ಹೋಗುತ್ತಿದ್ದಳು ಎನ್ನಲಾಗಿದೆ. ಈ ವಿಷಯವಾಗಿ ದಂಪತಿಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಮುನಿರಾಜು ಅವರು ತೀವ್ರವಾಗಿ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

ಇದೇ ವಿಚಾರವಾಗಿ ನಿನ್ನೆ ಮಧ್ಯರಾತ್ರಿ ಒಂದು ಗಂಟೆಯವರೆಗೂ ಸ್ಥಳೀಯರು ಹಾಗೂ ಪತ್ನಿಯ ಸಂಬಂಧಿಕರು ನ್ಯಾಯ ಪಂಚಾಯಿತಿ ನಡೆಸಿದ್ದರು ಎಂದು ತಿಳಿದುಬಂದಿದೆ. ಅದಾದ ಬಳಿಕವೇ ಮುನಿರಾಜು ಅನುಮಾನಾಸ್ಫದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ. ಘಟನೆ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ