ಜನಾರ್ದನ ರೆಡ್ಡಿ 
ರಾಜ್ಯ

ಬಳ್ಳಾರಿ ಫೈರಿಂಗ್: ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ!

ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ನಡೆಸಿದ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಬಳ್ಳಾರಿ: ಈ ಹಿಂದೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ಈಗ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದ್ದು, ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಗಲಾಟೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ನಡೆಸಿದ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದೆ. ಆರಂಭದಲ್ಲಿ ಒಂದು ಬುಲೆಟ್ ಪತ್ತೆಯಾಗಿದ್ದು, ಇದೀಗ ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ.

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸಹಾಯಕ ಚಾನೆಲ್ ಶೇಖರ್ ನೀಡಿದ ದೂರಿನ ಆಧಾರದ ಮೇಲೆ ಇಂದು ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಜನಾರ್ದನ ರೆಡ್ಡಿ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಾಜಿ ಸಚಿವ ಬಿ. ಶ್ರೀರಾಮುಲು ಅವರನ್ನು ಮೂರನೇ ಆರೋಪಿಯಾಗಿ, ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋತ್ಕರ್ ಅವರನ್ನು ನಾಲ್ಕನೇ ಆರೋಪಿಯನ್ನಾಗಿ ಮಾಡಲಾಗಿದೆ. ಎಫ್‌ಐಆರ್‌ನಲ್ಲಿ ಒಟ್ಟು 11 ಜನರನ್ನು ಹೆಸರಿಸಲಾಗಿದೆ.

ಬಳ್ಳಾರಿ ಫೈರಿಂಗ್ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಬಳ್ಳಾರಿಗೆ ಭೇಟಿ ನೀಡಲಿದ್ದು, ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!