ವಿಜಯಲಕ್ಷ್ಮಿ ದರ್ಶನ್ 
ರಾಜ್ಯ

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌: ಟೆಕ್ಕಿ ಮತ್ತು ಆಟೋ ಡ್ರೈವರ್ ಬಂಧನ

ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿ ಆಟೋರಿಕ್ಷಾ ಚಾಲಕ ಚಂದ್ರಶೇಖರ್ ಬಿ (45) ಮತ್ತು ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ (31) ಬಂಧಿತ ಆರೋಪಿಗಳು

ಬೆಂಗಳೂರು: ನಟ ದರ್ಶನ್ ತೂಗುದೀಪ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಆಟೋರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿ ಆಟೋರಿಕ್ಷಾ ಚಾಲಕ ಚಂದ್ರಶೇಖರ್ ಬಿ (45) ಮತ್ತು ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ (31) ಬಂಧಿತ ಆರೋಪಿಗಳು

ಡಿಸೆಂಬರ್ 24 ರಂದು ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮತ್ತು ಅವರ ಕುಟುಂಬದ ವಿರುದ್ಧ ಕೀಳು ಮಟ್ಟದ ಅಶ್ಲೀಲ, ಅವಹೇಳನಕಾರಿ ಪೋಸ್ಟ್‌ಗಳು, ಕಾಮೆಂಟ್‌ಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ವಿಜಯಲಕ್ಷ್ಮಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತನಿಖೆಯ ಸಮಯದಲ್ಲಿ, ಆರೋಪಿಗಳು ವಿಜಯಲಕ್ಷ್ಮಿ ಮತ್ತು ಅವರ ಕುಟುಂಬದ ವಿರುದ್ಧ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿರುವುದು ತಿಳಿದು ಬಂದಿದೆ. ತನಿಖೆ ಮುಂದುವರಿದಿದ್ದು ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ" ಎಂದು ನಗರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Zಗಳು, ಗುಂಡೇಟಿಗೆ 7 ಮಂದಿ ಬಲಿ!

SCROLL FOR NEXT