ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು-ಕನ್ಯಾಕುಮಾರಿಗೆ ಸೈಕಲ್ ಸವಾರಿ: ಸುರೇಶ್ ಕುಮಾರ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು ನನಗೆ ಖುದ್ದು ಫೋನ್ ಮಾಡಿ ನಾನು ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಮಾಡಿದ್ದಕ್ಕೆ ಅಭಿನಂದಿಸಿ ಸ್ಪೂರ್ತಿ ನೀಡಿದರು.

ಬೆಂಗಳೂರು: 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿ.ಮೀ. ದೂರದ ಕನ್ಯಾಕುಮಾರಿಗೆ ಸೈಕಲ್‌ ಯಾತ್ರೆ ನಡೆಸಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಗುರುವಾರ ದೂರವಾಣಿ ಮೂಲಕ ಸುರೇಶ್‌ಕುಮಾರ್ ಅವರನ್ನು ಸಂಪರ್ಕಿಸಿರುವ ಪ್ರಧಾನಿ ಮೋದಿ ಅವರು ಸೈಕಲ್‌ ಯಾತ್ರೆಯ ಅನುಭವ ಪಡೆದುಕೊಂಡು, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಖುದ್ದು ಸುರೇಶ್‌ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು ನನಗೆ ಖುದ್ದು ಫೋನ್ ಮಾಡಿ ನಾನು ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಮಾಡಿದ್ದಕ್ಕೆ ಅಭಿನಂದಿಸಿ ಸ್ಪೂರ್ತಿ ನೀಡಿದರು ಎಂದು ಹೇಳಿದ್ದಾರೆ.

51 ವರ್ಷಗಳ ನಂತರ ಮತ್ತೊಮ್ಮೆ ವಿವೇಕಾನಂದ ಶಿಲಾ ಸ್ಮಾರಕಕ್ಕೆ ನನ್ನ ಸ್ನೇಹಿತರ ಜೊತೆ ಸೈಕಲ್ ಸವಾರಿ ಮಾಡಿರುವುದು ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 2025ರಲ್ಲಿ ನಮ್ಮ ತಂಡ 8,000 ಕಿ.ಮೀ. ದೂರದಷ್ಟು ಸೈಕ್ಲಿಂಗ್ ಮಾಡಿರುವ ಮಾಹಿತಿ ಪಡೆದು ಅಚ್ಚರಿ ಮತ್ತು ಸಂತಸ ಎರಡನ್ನೂ ವ್ಯಕ್ತಪಡಿಸಿದರು. ಅದರಲ್ಲೂ ತೀವ್ರ ಅನಾರೋಗ್ಯದ ನಂತರ ನಾನು ಈ ಕಾರ್ಯ ಕೈಗೊಂಡ ಬಗ್ಗೆ ಪ್ರಧಾನಿಗಳು ನನ್ನ ಬೆನ್ನು ತಟ್ಟಿದ್ದು ನನ್ನ ಸುಕೃತ ಎಂದು ತಿಳಿಸಿದ್ದಾರೆ.

ಈ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕನ್ನಡದಲ್ಲೇ ಪೋಸ್ಟ್ ಮಾಡಿದ್ದು, ಸುರೇಶ್ ಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಶ್ರೀ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ. ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್