ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆ ಕುರಿತು ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಟಿ ರಘುಮೂರ್ತಿ, ಸಂಸದ ಕುಮಾರ್ ನಾಯಕ್, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಅವರು ಸಮಿತಿಯಲ್ಲಿರುತ್ತಾರೆ.