ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಆರಂಭವಾದ ಗಲಾಟೆ ಗಾಳಿಯಲ್ಲಿ ಗುಂಡು ಹಾರಿಸಿ ಅದು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಇದೀಗ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.
ನಿನ್ನೆ ಸಂಜೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ದೂರು ನೀಡಲಾಗಿತ್ತು. ಶಾಸಕ ಜನಾರ್ದನರೆಡ್ಡಿ ಹಲ್ಲೆ, ಕೊಲೆ ಯತ್ನ ಆರೋಪದಡಿ ದೂರು ನೀಡಿದ್ದರು. ಮತ್ತೊಂದೆಡೆ ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪದಡಿ ಬಿಜೆಪಿ ಕಾರ್ಯಕರ್ತ ನಾಗರಾಜ್ ಕೂಡ ನೀಡಿದರು. ದೂರು ನೀಡುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಇದ್ದರು. ಎಎಸ್ಪಿ ರವಿಕುಮಾರ್ ದೂರ ಸ್ವೀಕರಿಸಿದ್ದು, ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.