ರಾಮಲಿಂಗಾ ರೆಡ್ಡಿ 
ರಾಜ್ಯ

ಅಕ್ರಮ ಬಾಂಗ್ಲಾ ವಲಸಿಗರು ಬೆಂಗಳೂರಿಗೆ ಹೇಗೆ ಬಂದರು? ಮೋದಿ-ಅಮಿತ್ ಶಾ ಏನು ಮಾಡುತ್ತಿದ್ದಾರೆ? ರಾಮಲಿಂಗಾ ರೆಡ್ಡಿ ಪ್ರಶ್ನೆ

ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ, ಹಾಗಾದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು?

ಕೋಲಾರ: ಬೆಂಗಳೂರು ಉತ್ತರ ಸಮೀಪದ ಕೋಗಿಲು ಬಡಾವಣೆಯಲ್ಲಿ ನೆಲೆಸಿರುವವರು ಬಾಂಗ್ಲಾ ದೇಶದವರು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಪ್ರಶ್ನಿಸಿದ್ದಾರೆ.

ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ, ಹಾಗಾದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು? ಬಾಂಗ್ಲಾದಿಂದ ಅಕ್ರಮವಾಗಿ ಬಂದಿದ್ದರೆ ಬಂಧಿಸಿ ಜೈಲಿಗೆ ಹಾಕಲಿ ಎಂದು ಸವಾಲು ಹಾಕಿದರು.

ರಾಜ್ಯದವರು ಅಥವಾ ಅಕ್ಕಪಕ್ಕದ ರಾಜ್ಯದವರು ಆಗಿದ್ದರೆ ಅರ್ಹರಿಗೆ ಮನೆ ನೀಡಬೇಕಾಗುತ್ತದೆ ಎಂದು ಹೇಳಿದರು.

ಬೆಂಗಳೂರು ಸುತ್ತಮುತ್ತ ಬಿಜೆಪಿ ಶಾಸಕರು ಭೂ ಮಂಜೂರಾತಿ ಸಮಿತಿ ಮೂಲಕ ಸಾವಿರಾರು ಎಕರೆಯನ್ನು ಕಾರ್ಯಕರ್ತರಿಗೆ ನೀಡಿದ್ದಾರೆ. ಸಿಬಿಐ ತನಿಖೆ ನಡೆಸಿದರೆ ಎಲ್ಲವೂ ಹೊರಗೆ ಬರುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!