ಆರೋಪಿ ರಾಕೇಶ್ 
ರಾಜ್ಯ

ಬೆಂಗಳೂರು: ರಾತ್ರಿ ಕೆಲಸ ಮುಗಿಸಿ ಪಿಜಿಗೆ ತೆರಳುತ್ತಿದ್ದ ವೈದ್ಯೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ!

ಆರೋಪಿಯನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ ಲೇಔಟ್‌ನಲ್ಲಿ ಡಿಸೆಂಬರ್ 16-17ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು.

ಬೆಂಗಳೂರು: ಕಳೆದ ತಿಂಗಳು ಕೆಲಸ ಮುಗಿಸಿ ಪೇಯಿಂಗ್ ಗೆಸ್ಟ್ ವೊಂದಕ್ಕೆ ತೆರಳುತ್ತಿದ್ದ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆರೋಪಿಯನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ ಲೇಔಟ್‌ನಲ್ಲಿ ಡಿಸೆಂಬರ್ 16-17ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು.

28 ವರ್ಷದ ವೈದ್ಯೆ ಆಸ್ಪತ್ರೆಯೊಂದರಲ್ಲಿ ಡ್ಯೂಟಿ ಮುಗಿಸಿ ಮಧ್ಯರಾತ್ರಿ 12.40ರ ಸುಮಾರಿಗೆ ಪಿಜಿಗೆ ಹಿಂತಿರುಗುತ್ತಿದ್ದಾಗ ಸ್ಕೂಟರ್ ನಲ್ಲಿ ಬಂದಿದ್ದ ಆರೋಪಿ, ವಿಳಾಸ ಕೇಳುವ ನೆಪದಲ್ಲಿ ವೈದ್ಯೆಯನ್ನು ಮಾತನಾಡಿಸಿದ್ದ. ನಂತರ ಸ್ಕೂಟರ್ ನಿಂದ ಇಳಿದು ಆಕೆಯ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ, ವೈದ್ಯೆ ಜೋರಾಗಿ ಕಿರುಚಾಟ ನಡೆಸಿದಾಗ ಅಲ್ಲಿಂದ ಆರೋಪಿ ಪರಾರಿ ಆಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಆಕೆಯ ದೂರಿನ ಆಧಾರದ ಮೇಲೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಹೆಣ್ಣಿನ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ) ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಗುರುತಿಸಿ, ಬಂಧಿಸಲಾಯಿತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್