ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಪೊಲೀಸರೊಂದಿಗೆ 'ಅನುಚಿತವಾಗಿ ವರ್ತಿಸಿದ' ಇಬ್ಬರ ಬಂಧನ

ಬಂಧಿತ ಆರೋಪಿಗಳನ್ನು 22 ವರ್ಷದ ಅಂಶ್ ಮೆಹ್ತಾ ಮತ್ತು ಪರ್ವ್ ರತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಚೆನ್ನೈ ಮೂಲದವರು ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು 22 ವರ್ಷದ ಅಂಶ್ ಮೆಹ್ತಾ ಮತ್ತು ಪರ್ವ್ ರತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಚೆನ್ನೈ ಮೂಲದವರು ಎಂದು ಅವರು ಹೇಳಿದ್ದಾರೆ.

ಘಟನೆಯ ಸಮಯದಲ್ಲಿ ಆರೋಪಿಗಳು ಮದ್ಯದ ಅಮಲಿನಲ್ಲಿದ್ದಿದ್ದರು.

ಪೊಲೀಸರ ಪ್ರಕಾರ, ವಿಧಾನಸೌಧ ಪೊಲೀಸ್ ಠಾಣೆಯ ಸಿಬ್ಬಂದಿ ರವಿ ಕೆ ಅವರು ಜನವರಿ 1, 2026 ರಂದು ಬೆಳಗಿನ ಜಾವ 1:40 ರ ಸುಮಾರಿಗೆ ಇಂಡಿಯನ್ ಎಕ್ಸ್‌ಪ್ರೆಸ್ ಕಟ್ಟಡದ ಬಳಿ ಗಸ್ತು ತಿರುಗುತ್ತಿದ್ದರು. ಈ ವೇಳೆ ನಾಲ್ಕು ಮಹಿಳೆಯರು ಕ್ಯಾಬ್‌ಗಾಗಿ ಕಾಯುತ್ತಿದ್ದಾಗ ಇಬ್ಬರು ಯುವಕರು ಅವರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಲಾಗಿದೆ.

ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಯುವಕರಿಗೆ ಹೊರಹೋಗುವಂತೆ ಸೂಚಿಸಿದಾಗ, ಅವರು ಪೊಲೀಸರ ಜಾಕೆಟ್ ಹರಿದು ಅವರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದರು. ನಂತರ ಅವರನ್ನು ಪೊಲೀಸ್ ಠಾಣೆಗೆ ಕರೆತಂದಾಗ, ಪೊಲೀಸ್ ಸಿಬ್ಬಂದಿ ಮತ್ತು ತನಿಖಾ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 132, 121(1) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್