ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಗಲಾಟೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ದಿಯ ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಪಂಜಾಬ್ ಮೂಲದವರಾದ ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್ ಹಾಗೂ ಗುರುಚರಣ ಸಿಂಗ್ ಬಂಧಿತ ಗನ್ ಮ್ಯಾನ್ ಗಳು.
ಜನವರಿ 1ರಂದು ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ ಈ ಮೂವರು ಗನ್ ಮ್ಯಾನ್ ಗಳು ಗಾಳಿಯಲ್ಲಿ ಫೈರಿಂಗ್ ಮಾಡಿದ್ದರು. ಮೂವರು ಗನ್‌ಮ್ಯಾನ್‌ಗಳು ಸೇರಿ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಇದೇ ಪ್ರಕರಣ ಸಂಬಂಧ 10 ಬಿಜೆಪಿ ಕಾರ್ಯಕರ್ತರನ್ನೂ ಬಂಧಿಸಲಾಗಿದೆ. ಬಂಧಿತ ಗನ್ ಮ್ಯಾನ್ ಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಬ್ರೂಸ್ ಪೇಟೆ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಬಿಜೆಪಿ ಕಾರ್ಯಕರ್ತರನ್ನು ಬಳ್ಳಾರಿಯ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.