ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಮರ್ಯಾದಾಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಘೋಷಣೆ

ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ.

ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಣಯ

ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು. ಈ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್