ರಂಜಿತಾ-ರಫೀಕ್ 
ರಾಜ್ಯ

ವಿವಾಹಿತೆ ರಂಜಿತಾ ಹತ್ಯೆಗೈದಿದ್ದ ಪ್ರಕರಣಕ್ಕೆ ಟ್ವಿಸ್ಟ್: ಕಾಡಿನಲ್ಲಿ ಆರೋಪಿ ರಫೀಕ್ ಶವ ಪತ್ತೆ!

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಆರೋಪಿ ರಫೀಕ್ ನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು.

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಆರೋಪಿ ರಫೀಕ್ ನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು. ರಂಜಿತಾಳ ಹತ್ಯೆ ನಂತರ ರಫೀಕ್ ಕೂಡ ಕಣ್ಮರೆಯಾಗಿದ್ದನು. ರಂಜಿತಾ ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್‌ಗೆ ಕರೆ ನೀಡಲಾಗಿತ್ತು. ಇದೀಗ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಪ್ರಕರಣದ ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಳಮ್ಮನಗರದ ನಿವಾಸಿ 30 ವರ್ಷದ ಆರೋಪಿ ಮಹಮ್ಮದ್ ರಫೀಕ್ ಇಮಾಮ್‌ಸಾಬ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಮಾಪುರ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ರಫಿಕ್‌ನ ಮೃತದೇಹ ಪತ್ತೆಯಾಗಿದೆ.

ಮುತಾಲಿಕ್ ಆಕ್ರೋಶ

ಈ ಘಟನೆ ಸಂಬಂಧ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲ್ಲಾಪುರದಲ್ಲಿ ಹಿಂದೂ ಯುವತಿಯ ಕೊಲೆಯಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ರಫೀಕ್​​ ಎಂಬಾತ ಕೊಲೆ ಮಾಡಿದ್ದಾನೆ. ಮೃತ ರಂಜಿತಾಗೆ ನಾನು ಶ್ರದ್ದಾಂಜಲಿ ಸಲ್ಲಿಸುತ್ತೇನೆ, ಆತನ ಬಂಧನವಾಗೋವರಗೆ ರಂಜಿತಾಳ ಶವ ಸಂಸ್ಕಾರ ಮಾಡಬಾರದು. ಆರೋಪಿಯನ್ನು ಒದ್ದು ಒಳಗೆ ಹಾಕಬೇಕು ಎಂದು ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದರು.

ಲವರ್ ಕೈಕೊಟ್ಟಿದ್ದರಿಂದ ನನ್ನ ತಂಗಿಗೆ ಗಂಟು ಬಿದ್ದಿದ್ದ ರಫೀಕ್

ವಿವಾಹಿತೆ ಮಹಿಳೆ ರಂಜಿತಾಳನ್ನ ರಫೀಕ್ ಬರ್ಬರವಾಗಿ ಹತ್ಯೆ ಮಾಡಿದ್ದನು. ಹಾಡಹಗಲೇ ರಂಜಿತಾ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು. ಇನ್ನು ಈ ಘಟನೆ ಬಗ್ಗೆ ಮೃತ ರಂಜಿತಾ ಸಹೋದರ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಹಾಡಹಗಲೇ ಕೃತ್ಯ ನಡೆಸಿದ್ದಾನೆ, ನನ್ನ ಕೈಯಲ್ಲಿಯೇ ತಂಗಿ ಜೀವ ಬಿಟ್ಟಿದ್ದಾಳೆ. ಹಣಕಾಸಿನ ವಿಚಾರದ ಹಿನ್ನೆಲೆಯಲ್ಲಿ ಆರೋಪಿ ರಫೀಕ್ ಮತ್ತು ರಂಜಿತಾಳ ಪರಿಚಯವಾಗಿತ್ತು. ರಫೀಕ್​ಗೆ ಲವರ್ ಕೈಕೊಟ್ಟಿದ್ದರಿಂದ ನನ್ನ ತಂಗಿಗೆ ಗಂಟು ಬಿದ್ದಿದ್ದ, ಈಗ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಮೃತ ರಂಜಿತಾಳ ಸಹೋದರ ವೀರಭದ್ರ ಆಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ಯುವ ಉದ್ಯೋಗ ಸೇತು, ವಿದ್ಯಾರ್ಥಿ ಸಹಾಯಹಸ್ತ, ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ CM ಡಿ ಕೆ ಶಿವಕುಮಾರ್ ಪ್ರಮುಖ ಘೋಷಣೆಗಳು-Video

'RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ': B L ಸಂತೋಷ್

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು